ತಾಲೂಕುಮಟ್ಟದ ಶಟಲ್ ಬ್ಯಾಡ್ಮಿಂಟನ್ : ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ತಾಲೂಕುಮಟ್ಟದ ಶಟಲ್ ಬ್ಯಾಡ್ಮಿಂಟನ್ : ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ಮಡಿಕೇರಿಯಲ್ಲಿ ನಡೆದ ತಾಲೂಕು ಮಟ್ಟದ 17 ವರ್ಷದೊಳಗಿನ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಜನರಲ್ ಕೆ. ಎಸ್. ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಫೈನಲ್ ಪಂದ್ಯಾವಳಿಯಲ್ಲಿ ನಾಪೋಕ್ಲುವಿನ ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳನ್ನು ಮಣಿಸಿ ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ರಯಾನ್, ರೋಹನ್ ರೈ, ಮನ್ಸೂರ್ ಹಾಗೂ ಶಾಮಿಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಂದ್ಯಾವಳಿಯಲ್ಲಿ ದೈಹಿಕ ಶಿಕ್ಷಕರಾಗಿ ಶಾಲೆಯ ಶಿಕ್ಷಕ ಸುನಿಲ್ ಕಾರ್ಯನಿರ್ವಹಿಸಿದರು. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಅಧ್ಯಕ್ಷರು ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.