ವಿರಾಜಪೇಟೆಯಲ್ಲಿ ಗುರುವಾರ ತಾಲೂಕು ಮಟ್ಟದ ಜಾನಪದ ಗ್ರಾಮೀಣ ಕ್ರೀಡೋತ್ಸವ
ಮಡಿಕೇರಿ ಫೆ. 11- ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಾಯೋಜಕತ್ವದಲ್ಲಿ ವಿರಾಜಪೇಟೆ ತಾಲೂಕು ಜಾನಪದ ಪರಿಷತ್ ಘಟಕ, ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮೀಣಾಭಿವೖದ್ದಿ ಯೋಜನೆ ಸಹಯೋಗದಲ್ಲಿ ಪೊನ್ನಂಪೇಟೆ ತಾಲೂಕು ಮಟ್ಟದ ಜಾನಪದ ಗ್ರಾಮೀಣ ಕ್ರೀಡೋತ್ಸವವನ್ನು ಫೆ.12 ರಂದು ಗುರುವಾರ ವಿರಾಜಪೇಟೆಯಲ್ಲಿ ಆಯೋಜಿಸಲಾಗಿದೆ.
ವೀರಾಜಪೇಟೆಯ ತಾಲೂಕು ಮೈದಾನದಲ್ಲಿ ಬೆಳಗ್ಗೆ 9.30 ಗಂಟೆಗೆ ಕ್ರೀಡಾಕೂಟವನ್ನು ಶಾಸಕರಾದ ಎ.ಎಸ್ ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ. ಅನಂತಶಯನ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾಯ೯ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದೇ೯ಶಕಿ ವಿಸ್ಮಯಿ ಚಕ್ರವತಿ೯, ವೀರಾಜಪೇಟೆ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ಎಂ.ಕೆ. ದೇಚಮ್ಮ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.ಕೇಶವಕಾಮತ್, , ಕಸಾಪದ ನಿಕಟಪೂವ೯ ಅಧ್ಯಕ್ಷ ಲೋಕೇಶ್ ಸಾಗರ್, ಪೊನ್ನಂಪೇಟೆ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಧಿಲನ್ ಚಂಗಪ್ಪ, ಪ್ರಧಾನ ಕಾಯ೯ದಶಿ೯ ಗೀತಾ ನಾಯ್ದು, ವಿರಾಜಪೇಟೆ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಟೋಮಿ ಥಾಮಸ್, ಪ್ರಧಾನ ಕಾಯ೯ದಶಿ೯ ರೆಜಿತಾಕಾಯ೯ಪ್ಪ ಜಿಲ್ಲಾ ಜಾನಪದ ಪರಿಷತ್ ಪ್ರಧಾನ ಕಾಯ೯ದಶಿ೯ ಎಸ್. ಐ. ಮುನೀರ್ ಅಹಮ್ಮದ್, ಖಜಾಂಜಿ ಎಸ್.ಎಸ್. ಸಂಪತ್ ಕುಮಾರ್ ಪಾಲ್ಗೊಳ್ಳಲಿದ್ದಾರೆ.
ಗ್ರಾಮೀಣ ಜಾನಪದ ಕ್ರೀಡಾಕೂಟದಲ್ಲಿ ಗೋಣಿಚೀಲ ಓಟ, ಹಗ್ಗಜಗ್ಗಾಟ, ಮಡಿಕೆ ಒಡೆಯುವುದು, ಸೇರಿದಂತೆ ವೈವಿಧ್ಯಮಯ ಜಾನಪದ ಕ್ರೀಡಾಸ್ಪಧೆ೯ ಆಯೋಜಿತವಾಗಿದೆ. ಸಮಾರೋಪ ಮತ್ತು ಬಹುಮಾನ ವಿತರಣಾ ಕಾಯ೯ಕ್ರಮ ಮಧ್ಯಾಹ್ನ 1 ಗಂಟೆಗೆ ಆಯೋಜಿತವಾಗಿದೆ ಎಂದು ಜಾನಪದ ಪರಿಷತ್ ಪ್ರಕಟಣೆ ತಿಳಿಸಿದೆ.