ತಾಲೂಕು ಮಟ್ಟದ ಫುಟ್ಬಾಲ್: ನಾಪೋಕ್ಲು ಕೆಪಿಎಸ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ಮಡಿಕೇರಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಫುಟ್ಬಾಲ್ ಕ್ರೀಡಾ ಕೂಟದಲ್ಲಿ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮೂರ್ನಾಡುವಿನ ಜೂನಿಯರ್ ಕಾಲೇಜು ಆಟದ ಮೈದಾನದಲ್ಲಿ ನಡೆದ ಫುಟ್ಬಾಲ್ ಪಂದ್ಯಾಟದಲ್ಲಿ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಾದ ಶಾಹಿಲ್ ಇಝಾನ್, ಮಹಮ್ಮದ್ ಹಾಶಿರ್, ಅಜ್ಮಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.