ತಾಲೂಕು ಮಟ್ಟದ ಪ್ರತಿಭಾಕಾರಂಜಿ: ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕಕ್ಕಬ್ಬೆ ಸರ್ಕಾರಿ ಶಾಲೆಯ ಮಿದ್ಲಾಜ್ ಪ್ರಥಮ
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು : ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕಕ್ಕಬ್ಬೆ ಕೇಂದ್ರ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಮಿದ್ಲಾಜ್ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಮಿದ್ಲಾಜ್ ವಲಯ ಮಟ್ಟದ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದರು. ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
