ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯ:ಸರ್ವದೈವತ ಕಾಲೇಜಿನ ಬಾಲಕಿಯರ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಿದ್ದಾಪುರ: ಸರ್ಕಾರಿ ಪದವಿ ಪೂರ್ವ ಕಾಲೇಜು ಪಾಲಿಬೆಟ್ಟದಲ್ಲಿ ನಡೆದ ಪದವಿ ಪೂರ್ವ ಬಾಲಕಿಯರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಗೋಣಿಕೊಪ್ಪಲಿನ ಸರ್ವದೈವತ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಹಾಗೂ ಬಾಲಕಿಯರು ಬಾಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಬೋಧಕ ಮತ್ತು ಬೋಧಕೇತರ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.ಇವರಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಮೋದ್ ಗೌಡ ಇವರು ತರಬೇತಿ ನೀಡಿದ್ದಾರೆ.