ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

Mar 14, 2026 - 11:27
 0  910
ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು
ಸಾಂದರ್ಭಿಕ ಚಿತ್ರ

ಕುಶಾಲನಗರ; ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ 7.30 ರ ಸಮಯದಲ್ಲಿ ಹೇರೂರುವಿನಲ್ಲಿ ನಡೆದಿದೆ.

 ತಮಿಳುನಾಡು ರಾಜ್ಯದ ನಿವಾಸಿ ಪ್ರಸ್ತುತ ಬೆಂಗಳೂರು ಕಾಲೇಜೊಂದರಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಸುದರ್ಶನ್ (22) ಮೃತ ದುರ್ದೈವಿ. ಕಾಲೇಜಿನ ತಂಡ ಕೊಡಗು ಜಿಲ್ಲೆಗೆ ಪ್ರವಾಸಕ್ಕೆಂದು ಬಂದಿದ್ದು, ಇಂದು ಬೆಳಿಗ್ಗೆ ಹೇರೂರಿನಲ್ಲಿ ಹಾರಂಗಿ ಜಲಾಶಯದ ಹಿನ್ನೀರಿನ ವೀಕ್ಷಣೆಗೆ ತೆರಳಿತ್ತು. ಈ ತಂಡದವರ ಪೈಕಿ ಸುದರ್ಶನ್ ಎಂಬಾತ ನೀರಿಗೆ ಇಳಿದಿದ್ದಾನೆ.

 ನಂತರ ಮೇಲಕ್ಕೆ ಬರಲಾಗದೆ ದುರಂತ ಸಾವಿಗೀಡಾಗಿದ್ದಾನೆ. ಸ್ಥಳಕ್ಕೆ ಸುಂಟಿಕೊಪ್ಪ ಠಾಣಾಧಿಕಾರಿ ಮೋಹನ್ ರಾಜ್ ಮತ್ತು ಸಿಬ್ಬಂದಿಗಳು ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳೀಯ ಮುಳುಗು ತಜ್ಞರಿಂದ ಮೃತದೇಹವನ್ನು ಹೊರಕ್ಕೆ ತೆಗೆಯಲಾಯಿತು.

What's Your Reaction?

Like Like 1
Dislike Dislike 0
Love Love 1
Funny Funny 1
Angry Angry 2
Sad Sad 3
Wow Wow 0