ತಮಿಳುನಾಡು ವಿಧಾನಸಭಾ ಚುನಾವಣೆ;ವೀಕ್ಷಕರಾಗಿ ಡಾ. ಮಂತರ್ ಗೌಡ
ತಮಿಳುನಾಡು; ವಿಧಾನಸಭಾ ಚುನಾವಣೆಗೆ ಕ್ಷಣ ಗಣನೆ ಆರಂಭಗೊಂಡಿದ್ದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರನ್ನು ವೀಕ್ಷಕರನ್ನಾಗಿ ನೇಮಿಸಿ ಎ.ಐ.ಸಿ.ಸಿ ಆದೇಶ ಹೊರಡಿಸಿದೆ.
ತಮಿಳುನಾಡಿನ ಉದಕಮಂಡಲಂ ( ಊಟಿ) ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯನ್ನು ತಕ್ಷಣವೇ ವಹಿಸಿಕೊಂಡು ಕಾರ್ಯೋನ್ಮುಖರಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕ್ರಮವಹಿಸುವಂತೆ ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ವೇಣಗೋಪಾಲ್ ರವರು ತಮ್ಮ ಆದೇಶದಲ್ಲಿ ನಿರ್ದೇಶನ ನೀಡಿದ್ದಾರೆ.