ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.11ರಂದು ಗೆಲುವು ಸಾಧಿಸಿದ ತಂಡಗಳು
ಮಡಿಕೇರಿ ಏ.11 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ' ಯಲ್ಲಿ ಏ.11ರಂದು ಗೆಲುವು ಸಾಧಿಸಿದ ತಂಡಗಳು.
ಮೈದಾನ 1;
ಕಟ್ಟೇರ (ಅರಮೇರಿ) ಮತ್ತು ಅಮ್ಮಾಟಂಡ ತಂಡಗಳ ನಡುವಿನ ಹಣಾಹಣಿಯಲ್ಲಿ ಅಮ್ಮಾಟಂಡ 7 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕಟ್ಟೇರ 6 ಓವರ್ ಗಳಲ್ಲಿ 5 ವಕೆಟ್ 73 ರನ್ ಗಳನ್ನು ಸೇರಿಸಿತು. ಅಮ್ಮಾಟಂಡ 5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 77 ರನ್ ಗಳನ್ನು ಗಳಿಸಿ ಗೆಲುವು ಸಾಧಿಸಿತು.
ಪಾಲಂದಿರ ಮತ್ತು ಹೊಟ್ಟೆಂಗಡ ನಡುವಿನ ಪಂದ್ಯದಲ್ಲಿ ಪಾಲಂದಿರ 58 ರನ್‌ಗಳಿಂದ ಜಯ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಲಂದಿರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 140 ರನ್ ಗಳನ್ನು ಗಳಿಸಿತು. ಹೊಟ್ಟೆಂಗಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 82 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.
ಕಾಳಚಂಡ ಮತ್ತು ಚಾರಿಮಂಡ ತಂಡಗಳ ನಡುವಿನ ಪಂದ್ಯದಲ್ಲಿ ಚಾರಿಮಂಡ 10 ವಿಕೆಟ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕಾಳಚಂಡ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 42 ರನ್ ಗಳನ್ನು ಸೇರಿಸಿತು. ಚಾರಿಮಂಡ ಕೇವಲ 1.5 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಭರ್ಜರಿ 46 ರನ್ ಗಳನ್ನು ಗಳಿಸಿ ಜಯ ತನ್ನದಾಗಿಸಿಕೊಂಡಿತು.
ಮೈದಾನ 2;
ಪರುವಂಡ ಮತ್ತು ನಾಯಕಂಡ ತಂಡಗಳ ನಡುವಿನ ಪಂದ್ಯದಲ್ಲಿ ಪರುವಂಡ 3 ರನ್ ಗಳಿಂದ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪರುವಂಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 46 ರನ್ ಗಳನ್ನು ಸೇರಿಸಿತು. ನಾಯಕಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 43 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.
ಪುದಿಯಂಡ ಮತ್ತು ಬೇರೆರ ನಡುವಿನ ಪಂದ್ಯದಲ್ಲಿ 25 ರನ್‌ಗಳಿಂದ ಬೇರೆರ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬೇರೆರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 67 ರನ್ ಗಳನ್ನು ಗಳಿಸಿತು. ಪುದಿಯಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 42 ರನ್ ಗಳನ್ನು ಮಾತ್ರ ಸೇರಿಸಿ ಸೋಲು ಕಂಡಿತು.
ಮುಂಡೋಟಿರ ಮತ್ತು ಕಾಡ್ಯಮಾಡ ತಂಡಗಳ ನಡುವಿನ ಪಂದ್ಯದಲ್ಲಿ ಕಾಡ್ಯಮಾಡ 4 ರನ್ ಗಳಿಂದ ವಿಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕಾಡ್ಯಮಾಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 56 ರನ್ ಗಳನ್ನು ಸೇರಿಸಿತು. ಮುಂಡೋಟಿರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 52 ರನ್ ಗಳನ್ನು ಗಳಿಸಿ ಸೋಲು ಅನುಭವಿಸಿತು.
ಕರ್ತಮಾಡ ಮತ್ತು ನಾಪಂಡ (ಕಾರುಗುಂದ) ನಡುವಿನ ಪಂದ್ಯದಲ್ಲಿ ಕರ್ತಮಾಡ 9 ವಿಕೆಟ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನಾಪಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 45 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಕರ್ತಮಾಡ 3.5 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 46 ರನ್ ಗಳನ್ನು ಸೇರಿಸಿ ಗೆಲುವಿನ ನಗು ಬೀರಿತು.
ಚಂಗುಲoಡ ಮತ್ತು ಕೋಡಿಮಣಿಯಂಡ ತಂಡಗಳ ನಡುವಿನ ಪಂದ್ಯದಲ್ಲಿ ಚಂಗುಲoಡ ಭರ್ಜರಿ 10 ವಿಕೆಟ್‌ಗಳ ಜಯ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೋಡಿಮಣಿಯಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 48 ರನ್ ಗಳನ್ನು ಗಳಿಸಿತು. ಚಂಗುಲoಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಕೇವಲ 2.3 ಓವರ್ ಗಳಲ್ಲಿ 50 ರನ್ ಗಳನ್ನು ಸೇರಿಸಿ ಗೆಲುವು ಕಂಡಿತು.
ಮಾದೇಟಿರ ಮತ್ತು ಕುಂಡ್ರoಡ ನಡುವಿನ ಹಣಾಹಣಿಯಲ್ಲಿ ಮಾದೇಟಿರ 8 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕುಂಡ್ರoಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 81 ರನ್ ಗಳನ್ನು ಸೇರಿಸಿತು. ಮಾದೇಟಿರ 5.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 82 ರನ್ ಗಳನ್ನು ಗಳಿಸಿ ಜಯ ಸಾಧಿಸಿತು.