ತೋಟದಿಂದ ಕಾಡಾನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ತೋಟದಿಂದ ಕಾಡಾನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ಸಿದ್ದಾಪುರ:ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಬಾಡಗ ಬಾಣಂಗಾಲ ಗ್ರಾಮದ ಬಾಣಂಗಾಲ ಎಸ್ಟೇಟ್ ಮತ್ತು ನ್ಯೂ ಮಾರ್ಗೋಳ್ಳಿ ಎಸ್ಟೇಟ್ ಒಳಗೆ ಇದ್ದ ಸುಮಾರು ಒಂದು ಮರಿಸೇರಿದ 8 ಕಾಡಾನೆಗಳನ್ನು ಕಾರ್ಯಾಚರಣೆ ನಡೆಸಿ ಮಾಲ್ದಾರೆ ಮೀಸಲು ಅರಣ್ಯಕ್ಕೆ ಹಿಮ್ಮೆಟಿಸಲಾಯಿತು .

 ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಯವರ ಸೂಚನೆ ಮೇರೆಗೆ ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಕೆ ಪಿ ರವರ ನಿರ್ದೇಶನದ ಮೇರೆಗೆ ವಲಯ ಅರಣ್ಯ ಅಧಿಕಾರಿ ಗಂಗಾಧರ್ ರವರ ಮಾರ್ಗದರ್ಶನದಲ್ಲಿ ಚೆನ್ನಂಗಿ ಶಾಖೆಯ ಉಪ ವಲಯ ಅರಣ್ಯ ಅಧಿಕಾರಿ ಶಶಿ ಪಿ ಟಿ ಮತ್ತು ತಂಡದವರು ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಚರಣೆಯಲ್ಲಿ ಆರ್ ಆರ್. ಟಿ. ತಂಡದ ರಂಜಿತ್, ಶಂಕರ್, ಪ್ರದೀಪ, ರೋಷನ್, ಸುಂದರ, ಧನು, ಪ್ರವೀಣ, ಪ್ರಜ್ವಲ್ ಮತ್ತು ಅರುಣ ಹಾಗೂ ವನ್ಯಜೀವಿ ವಲಯದ ಸಿಬ್ಬಂದಿಗಳು ಕೃಷ್ಣಪ್ಪ ಆಕಾಶ್ ಮತ್ತು ಶಿವು ಭಾಗವಹಿಸಿದ್ದರು.