ನಾಳೆ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸೋಮವಾರಪೇಟೆ ತಾಲ್ಲೂಕು ಘಟಕ ಉದ್ಘಾಟನೆ
ಸೋಮವಾರಪೇಟೆ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸೋಮವಾರಪೇಟೆ ತಾಲ್ಲೂಕು ಘಟಕದ ಉದ್ಘಾಟನಾ ಕಾರ್ಯಕ್ರಮ ಜು. 26( ನಾಳೆ) ರಂದು ಪತ್ರಿಕಾ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದು ಮಹಿಳಾ ಘಟಕದ ಕಾರ್ಯದರ್ಶಿ ಕೆ.ಎಸ್. ದೀಪಿಕಾ ಸುದರ್ಶನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ವೇದಿಕೆಯ ರಾಜ್ಯ ಸಮಿತಿ ಖಜಾಂಚಿ ಎಚ್.ಎಸ್.ಬಸವರಾಜು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಜಲಾ ಕಾಳಪ್ಪ ವಹಿಸಲಿದ್ದಾರೆ. ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ.ರಘು, ತಾಲ್ಲೂಕು ಘಟಕದ ಅಧ್ಯಕ್ಷೆ ಶರ್ಮಿಳಾ ರಮೇಶ್, ಕಾರ್ಯದರ್ಶಿ ಹೇಮಂತ್ ಪಾರೇರ, ಹಿರಿಯ ಸಾಹಿತಿ ನ.ಲ. ವಿಜಯ, ಜಿಲ್ಲಾ ಸಮಿತಿ ಗೌರವಾಧ್ಯಕ್ಷ ಎಚ್.ಜೆ. ಜವರಪ್ಪ, ಉಪಾಧ್ಯಕ್ಷೆ ರಾಣಿ ರವೀಂದ್ರ, ಕುಶಾಲನಗರ ತಾಲ್ಲೂಕು ಘಟಕದ ಅಧ್ಯಕ್ಷ ದಿನೇಶ್ ಆಚಾರಿ ಭಾಗವಹಿಸಲಿದ್ದಾರೆ.