ಶ್ರದ್ಧಾ ಭಕ್ತಿಯಿಂದ ಜರುಗಿದ ನಾಪೋಕ್ಲು ಬಳಿಯ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವರ ಉತ್ಸವ

ಶ್ರದ್ಧಾ ಭಕ್ತಿಯಿಂದ ಜರುಗಿದ ನಾಪೋಕ್ಲು ಬಳಿಯ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವರ ಉತ್ಸವ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು:ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವರ ವಾರ್ಷಿಕ ಉತ್ಸವವು ಎರಡು ದಿನಗಳ ಕಾಲ ವಿವಿಧ ದೇವರ ಕೋಲಗಳೊಂದಿಗೆ ಸಂಭ್ರಮ ಶ್ರದ್ಧಾ ಭಕ್ತಿಯಿಂದ ನಡೆಯಿತು.

ಬೇತು ಗ್ರಾಮದ ಶ್ರೀಮಕ್ಕಿ ಶಾಸ್ತಾವು ದೇವರ ಸನ್ನಿಧಿಯಲ್ಲಿ ಶುಕ್ರವಾರ ಬೆಳಗ್ಗೆ ಅಜ್ಜಪ್ಪ ದೇವರ ಕೋಲ ಹಾಗೂ ಅಪರಾಹ್ನ ವಿಷ್ಣುಮೂರ್ತಿ ದೇವರಕೋಲಗಳು ತಮ್ಮ ಸಾಂಪ್ರದಾಯಿಕ ವೇಷಭೂಷಣಗಳೊಂದಿಗೆ ಗಮನ ಸೆಳೆಯಿತು. ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡು ಭಯ ಭಕ್ತಿಯಿಂದ ಕಾರ್ಯಕ್ರಮವನ್ನು ವೀಕ್ಷಿಸಿದರು.

 ಉತ್ಸವದಲ್ಲಿ ಭಕ್ತಾದಿಗಳು ದೇವರಿಗೆ ವಿವಿಧ ರೀತಿಯ ಹರಕೆಗಳನ್ನು ಸಲ್ಲಿಸಿದರು. ದೇವಾಲಯದ ವತಿಯಿಂದ ಉತ್ಸವ ವೀಕ್ಷಿಸಲು ಬಂದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನದಾನ ಕಾರ್ಯಕ್ರಮ ನೆರವೇರಿತು.

 ಶುಕ್ರವಾರ ಅಪರಾಹ್ನ ಜರುಗಿದ ವಿಷ್ಣುಮೂರ್ತಿ ದೇವರಕೋಲವನ್ನು ಭಕ್ತಾದಿಗಳು ಭಯ ಭಕ್ತಿಯಿಂದ ವೀಕ್ಷಿಸಿದರು. ಉತ್ಸವದ ಅಂಗವಾಗಿ ಗುರುವಾರ ರಾತ್ರಿ ದೀಪಾರಾಧನೆ ನಡೆಯಿತು. ದೇವಾಲಯದ ಅರ್ಚಕರಾದ ದಿವಾಕರ್ ಅವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ನಡೆಯಿತು.

 ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ಅಧಿಕ ಸಂಖ್ಯೆಯಲ್ಲಿ ಊರಿನ ಪರ ಊರಿನ ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿ ಪುನೀತರಾದರು.