2026ರ ಏಪ್ರಿಲ್ 17 ರಿಂದ 24ರ ವರೆಗೆ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್
(ವರದಿ:ಝಕರಿಯ ನಾಪೋಕ್ಲು)
ನಾಪೋಕ್ಲು: ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಎಮ್ಮೆ ಮಾಡು ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಸೂಫಿ ಶಹೀದ್ (ರ.ಅ) ಸಯ್ಯದ್ ಹಸನ್ ಸಖಾಫ್ ಹಳ್ರಮಿ(ನ.ಮ)ಹಾಗೂ ಇತರ ಮಹಾನುಭಾವರ ಹೆಸರಿನಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು 2026ರ ಏಪ್ರಿಲ್ 17ರಿಂದ 24ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದು ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷರು ಆಡಳಿತಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.