ಕನ್ನಡದ ಅಭಿಮಾನ ನವೆಂಬರ್ ತಿಂಗಳಿಗೆ ಸೀಮಿತವಾಗದೆ ದೈನಂದಿನ ಜೀವನದಲ್ಲಿ ವ್ಯವಹಾರಿಕ ಭಾಷೆಯಾಗಿ ಕನ್ನಡ ಬಳಕೆಯಾಗಲಿ: ಬಾವ ಮಾಲ್ದಾರೆ
ಸಿದ್ದಾಪುರ :- ಗಡಿಭಾಗದಲ್ಲಿ ಕನ್ನಡ ಭಾಷೆ ಸಂಸ್ಕೃತಿ ಆಚರಣೆ ಕ್ಷೀಣಿಸುತ್ತಿದ್ದು ದೈನಂದಿನ ಜೀವನದಲ್ಲಿ ಕನ್ನಡ ವ್ಯವಹಾರಿಕ ಭಾಷೆಯಾಗಿ ಬೆಳೆಸಬೇಕೆಂದು ಬಾವ ಮಾಲ್ದಾರೆ ಕರೆ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ ಅಮ್ಮತ್ತಿ ಹೋಬಳಿ, ಸಿದ್ದಾಪುರ ಆಟೋ ಮಾಲೀಕರ ಮತ್ತು ಚಾಲಕರ ಸಂಘ ವಿ ಸೆವೆನ್ ಯುವಕ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡರ ಬಣ ಇವರ ಸಂಯುಕ್ತ ಆಶ್ರಯದಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಆಚರಣೆ ಸಮಾರದಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಬಾವ ಮಾಲ್ದಾರೆ ,
ಗಡಿ ಭಾಗದಲ್ಲಿ ಕನ್ನಡ ಅಭಿಮಾನ ದಿನದಿಂದ ದಿನಕ್ಕೆ ಸೊರಗುತ್ತಿದೆ. ಬಾಳಿ ಬದುಕುವ ನೆಲ,ಜಲ, ಭಾಷೆಯನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು ಕನ್ನಡದ ಅಭಿಮಾನ ನವೆಂಬರ್ ತಿಂಗಳಿಗೆ ಸೀಮಿತವಾಗದೆ ದೈನಂದಿನ ಜೀವನದಲ್ಲಿ ವ್ಯವಹಾರಿಕ ಭಾಷೆಯಾಗಿ ಕನ್ನಡ ಬಳಕೆಯಾಗಬೇಕು ಎಂದರು.
ಸಿದ್ದಾಪುರದ ಆಟೋ ನಿಲ್ದಾಣದಲ್ಲಿ ಏರ್ಪಡಿಸಲಾಗಿದ್ದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಅಮ್ಮತ್ತಿ ಹೋಬಳಿ ಅಧ್ಯಕ್ಷ ಟಿ. ಹೆಚ್. ಮಂಜುನಾಥ್, ಕನ್ನಡ ನಾಡು ನುಡಿ ಏಳಿಗೆಗಾಗಿ ಎಲ್ಲಾ ಕನ್ನಡ ಅಭಿಮಾನಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಭಾಷೆಯನ್ನು ಬಳಸುವಂತಾಗಬೇಕು. ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅಂದಿನ ಹಳೆ ಮೈಸೂರು ಪ್ರಾಂತ್ಯವನ್ನು ಕರ್ನಾಟಕ ಎಂದು ಮರು ನಾಮಕರಣ ಮಾಡಲಾಗಿದ್ದು ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಹಲವಾರು ಹಿರಿಯ ಹೋರಾಟಗಾರರ ತ್ಯಾಗ ಬಲಿದಾನವನ್ನು ಗೌರವಿಸುವ ದಿನ ಇದಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದಂತ ರೀನಾ ತುಳಸಿ ಗಣಪತಿ, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ. ನಾ ಕನ್ನಡಿಗ ಟಾಮಿ ಥಾಮಸ್ ಚಾಲಕರ ಮಾಲೀಕರ ಸಂಘದ ಅಧ್ಯಕ್ಷರಾದಂತಹ ಎಂ ಆರ್ ಸಲೀಂ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಮಹಿಳಾ ಆಟೋ ಚಾಲಕಿ ಸುಜಾತ ಯಮುನಾ ವಿ ಸೆವೆನ್ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಜಾಫರ್ ಅಲಿ, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.
