ತಮ್ಮನ್ನನ್ನೇ ಬರ್ಬವಾಗಿ ಕೊಂದ ಅಣ್ಣ;ಸಹೋದರನನ್ನು ಕೊಲೆ ಮಾಡಲು‌ ಸಾಥ್ ಕೊಟ್ಟಿದ್ದ ತಂದೆ

Mar 30, 2026 - 23:52
 0  1.1k
ತಮ್ಮನ್ನನ್ನೇ ಬರ್ಬವಾಗಿ ಕೊಂದ ಅಣ್ಣ;ಸಹೋದರನನ್ನು ಕೊಲೆ ಮಾಡಲು‌ ಸಾಥ್ ಕೊಟ್ಟಿದ್ದ ತಂದೆ
ಸಾಂದರ್ಭಿಕ ಚಿತ್ರ

ತುಮಕೂರು, ಮಾರ್ಚ್ 30: ಕೌಟುಂಬಿಕ ಕಲಹಕ್ಕೆ ಯುವಕನೋರ್ವ ಬಲಿಯಾಗಿರುವ ಘಟನೆ ತುಮಕೂರು ನಗರದ ಬನಶಂಕರಿಯಲ್ಲಿ ನಡೆದಿದೆ.

ಅಣ್ಣನಿಂದಲೇ ತಮ್ಮ ಭೀಕರವಾಗಿ ಕೊಲೆಯಾಗಿದ್ದರೆ, ತಂದೆಯೂ ಕೃತ್ಯಕ್ಕೆ ಸಾಥ್ ಕೊಟ್ಟಿದ್ದ ಎಂಬ ವಿಷಯ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ. ಸ್ಟಾಲಿನ್ (29) ಮೃತ ಯುವಕನಾಗಿದ್ದು, ಆತನ ಸಹೋದರ ನವೀನ್ ಮತ್ತು ತಂದೆ ಜಾನ್ ಪಾಲ್ ಎಂಬುವವರೇ ಆರೋಪಿಗಳಾಗಿದ್ದಾರೆ.

 ಮೃತ ನವೀನ್ಗೆ ವಿವಾಹ ಕೂಡ ನಿಶ್ಚಯವಾಗಿತ್ತು. ಆತ ಜೊತೆಯಾಗಿ ಬಾಳಬೇಕಿದ್ದ ಯುವತಿ ಆಡಿದ್ದ ಒಂದು ಮಾತೇ ಸ್ಟಾಲಿನ್ ಕುಟುಂಬದಲ್ಲಿ ಬೆಂಕಿಯ ಕಿಡಿ ಹೊತ್ತಿಸಿತ್ತು ಎನ್ನಲಾಗಿದೆ. ಇದೇ ತಿಂಗಳ 22ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಜಾನ್ ಪಾಲ್ಗೆ ಇಬ್ಬರು ಗಂಡುಮಕ್ಕಳಿದ್ದು, ಆ ಪೈಕಿ ನವೀನ್ ಮೊದಲ ಮಗನಾದರೆ ಮೃತ ಸ್ಟಾಲಿನ್ ಎರಡನೇ ಪುತ್ರ.

ನವೀನ್ಗೆ ಅದಾಗಲೇ ಮದುವೆಯಾಗಿದ್ದು, ಆತನ ಹೆಂಡತಿ ತುಂಬು ಗರ್ಭಿಣಿ ಕೂಡ ಹೌದು. ಈ ನಡುವೆ ಸ್ಟಾಲಿನ್ಗೆ ಜನಿಫರ್ ಎಂಬ ಯುವತಿಯ ಜೊತೆಗೆ ಮದುವೆ ನಿಶ್ಚಯವಾಗಿತ್ತು. ವಿವಾಹ ತಯಾರಿಯ ನಡುವೆ ತಾನು ಮದುವೆಯಾಗಬೇಕಿದ್ದ ಸ್ಟಾಲಿನ್ ಮತ್ತು ಆತನ ಅತ್ತಿಗೆ ಅಂದರೆ ನವೀನ್ ಪತ್ನಿ ನಡುವೆ ಅಕ್ರಮ ಸಂಬಂಧ ಇರೋದಾಗಿ ಆಕೆ ಗಂಭೀರ ಆರೋಪ ಮಾಡಿದ್ದಳು.

ಇದೇ ವಿಚಾರವಾಗಿ ಸ್ಟಾಲಿನ್ ಮನೆಯಲ್ಲಿ ಒಂದು ವಾರದಿಂದ ಗಲಾಟೆ ನಡೆಯುತ್ತಿತ್ತು. ಇದು ವಿಕೋಪಕ್ಕೆ ಹೋಗಿ ಮಾರ್ಚ್ 22ರಂದು ಅಣ್ಣ ನವೀನ್ ತಮ್ಮ ಸ್ಟಾಲಿನ್ನ ಕೊಲೆ ಮಾಡಿದ್ದ. ಬಳಿಕ ಘಟನೆಯನ್ನು ಮುಚ್ಚಿಹಾಕುವ ಪ್ರಯತ್ನವನ್ನು ನಡೆಸಲಾಗಿತ್ತು ಎಂಬುದೀಗ ಗೊತ್ತಾಗಿದೆ.

ಕಿರಿಯ ಮಗನ ಕೊಲೆ ಮಾಡಿದ್ದ ನವೀನ್ಗೆ ತಂದೆ ಜಾನ್ ಪಾಲ್ ಕೂಡ ಬೆಂಬಲ ನೀಡಿದ್ದು, ಆರೋಪಿಗಳು ಘಟನೆ ಬಗ್ಗೆ ಕಥೆ ಕಟ್ಟಿದ್ದರು. ಬೈಕ್ ನಿಲ್ಲಿಸುವಾಗ ಕುಸಿದು ಬಿದ್ದು ಕಂಬಿ ತಾಗಿ ಹೊಟ್ಟೆಗೆ ಗಾಯವಾಗಿದೆ ಎಂದು ಹೇಳಿ ಸ್ಟಾಲಿನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು.

ಆದರೆ ಐದು ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಿದ್ದಗಂಗಾ ಆಸ್ಪತ್ರೆಯಲ್ಲಿ ಸ್ಟಾಲಿನ್ ಮೃತಪಟ್ಟಿದ್ದಾರೆ. ಮೃತದೇಹ ಕುಟುಂಬಕ್ಕೆ ನೀಡುವ ಮುನ್ನ ಜಯನಗರ ಪೊಲೀಸರಿಗೆ ಆಸ್ಪತ್ರೆ ಮಾಹಿತಿ ಹಿನ್ನೆಲೆ ಪರಿಶೀಲಿಸಿದಾಗ ಚಾಕುವಿನಿಂದ ಇರಿದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ತಂದೆ ಜಾನ್ ಪಾಲ್ನ ಪೊಲೀಸರು ವಿಚಾರಣೆ ನಡೆಸಿದ್ದು, ಈತ ಆರಂಭದಲ್ಲಿ ಕತೆ ಹೇಳಿದ್ದ. ಆದರೆ ಬಳಿಕ ಅಸಲಿ ಸತ್ಯವನ್ನು ಬಿಚ್ಚಿಟ್ಟ ಹಿನ್ನೆಲೆ ಕೊಲೆ ರಹಸ್ಯ ಬಯಲಾಗಿದೆ.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 3
Wow Wow 0