Kodagu

25 ವರ್ಷಗಳಿಂದ ಅಭಿವೃದ್ಧಿ ಕಾಣದ ರಸ್ತೆಗೆ ಕೊನೆಗೂ ಸಿಕ್ತು ಮುಕ್ತಿ:ಶಾಸಕ ಎ‌ಎಸ್ ಪೊನ್ನಣ್ಣ ಅವರ ಅನುದಾನದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆ

admincoorgdaily

ವಿರಾಜಪೇಟೆ:ಕಳೆದ 25 ವರ್ಷಗಳಿಂದ ದುಸ್ಥಿತಿಯಲ್ಲಿದ್ದ ಚೆಂಬೆಬೆಳ್ಳೂರು ಗ್ರಾ.ಪಂ. ವ್ಯಾಪ್ತಿಯ ಐಮಂಗಲ (ಕೊಮ್ಮೆತೋಡು) ಗ್ರಾಮದ ಪೊಯ್ಯಟೀರ ಕುಟುಂಬಸ್ಥರ ಮನೆಗೆ ತೆರಳುವ ರಸ್ತೆಯ ಅಭಿವೃದ್ಧಿಗಾಗಿ ಶಾಸಕರಾದ ಎ.ಎಸ್ ಪೊನ್ನಣ್ಣ ಅವರ ಅನುದಾನದಲ್ಲಿ ರೂ ಎರಡು ಲಕ್ಷ ವೆಚ್ಚದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ‌. ವೀರಾಜಪೇಟೆ ಕ್ಷೇತ್ರದ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿರುವ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರಿಗೆ ಗ್ರಾಮಸ್ಥರು‌ ಕೃತಜ್ಞತೆ ಸಲ್ಲಿಸಿದ್ದಾರೆ.