ಸರಕಾರದ ಯೋಜನೆಗಳನ್ನು ಯಶಸ್ವಿಯಾಗಿ ಜನರಿಗೆ ತಲುಪಿಸಲು ಸರ್ಕಾರಿ ನೌಕರರ ಪಾತ್ರ ಮುಖ್ಯ:ಶಾಸಕ ಎಎಸ್ ಪೊನ್ನಣ್ಣ
ವಿರಾಜಪೇಟೆ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ವಿರಾಜಪೇಟೆ ಶಾಖೆಯವರು ಆಯೋಜಿಸಿದ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿ ಶುಭ ಕೋರಿದರು.
ಸರ್ಕಾರಿ ನೌಕರರ ಸಂಘದ ಮಹಾಸಭೆ ಹಾಗೂ ಆ ಬಳಿಕ ಸಂಘದವರು ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕರು, ಪ್ರತಿಯೊಂದು ಸಂಘವು ಅದರ ಸದಸ್ಯರ ಏಳಿಗೆಗಾಗಿ ಶ್ರಮಿಸಬೇಕು.
ಇಂದು ಸರಕಾರ ತನ್ನ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ಜನರಿಗೆ ತಲುಪಿಸಬೇಕೆಂದರೆ ಇದರಲ್ಲಿ ನೌಕರರ ಪಾತ್ರ ತುಂಬಾ ಮಹತ್ವದ್ದಾಗಿದೆ. ಇದನ್ನು ಪ್ರತಿಯೊಬ್ಬರು ಅರಿತುಕೊಂಡು ತಮ್ಮ ಜವಾಬ್ದಾರಿಯನ್ನು ಪರಿಪೂರ್ಣವಾಗಿ ನಿಭಾಯಿಸಬೇಕು ಎಂದು ಸಲಹೆ ನೀಡಿದರು. ಬಳಿಕ ತಮ್ಮ ಸಂದೇಶ ನೀಡಿದ ಮ
ಶಾಸಕರು, ಸಾರ್ವಜನಿಕ ಸೇವೆ ಕೇವಲ ಉದ್ಯೋಗವಲ್ಲ, ಅದು ಸಮಾಜ ಸೇವೆ. ಇಂದಿನ ಕಾರ್ಯಕ್ರಮದಲ್ಲಿ ನೌಕರರನ್ನು ಪ್ರೋತ್ಸಾಹಿಸುವ ಜೊತೆಗೆ, ಅವರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯ ಹಾಗೂ ಇದು ಸಾರ್ಥಕತೆ ಮೂಡಿಸುತ್ತದೆ. ಈ ಕಾರ್ಯಕ್ರಮವು ಸದಾ ಸ್ಮರಣೀಯವಾಗಿರಲಿ ಹಾಗೂ ಎಲ್ಲರಿಗೂ ಮಾದರಿಯಾಗಿರಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಸಂಘದ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.