ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆಯನ್ನು ಯಾವುದೇ ರಾಜಕೀಯ ಒತ್ತಡವಿಲ್ಲದೆ ಪಾರದರ್ಶಕವಾಗಿ ಮಾಡಲಾಗುವುದು;ಶಾಸಕ ಅಭಿಜಿತ್
ಮಡಿಕೇರಿ: ಕಾಂಗ್ರೆಸ್ ಪಕ್ಷವನ್ನು ಗ್ರಾಮ, ಬೂತ್ ಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂಘಟನ್ ಸೃಜನ್ ಅಭಿಯಾನ ಆರಂಭಿಸಲಾಗಿದೆ. ಇದರ ಭಾಗವಾಗಿ ಜಿಲ್ಲಾಧ್ಯಕ್ಷರ ಆಯ್ಕೆಯನ್ನು ಯಾವುದೇ ರಾಜಕೀಯ ಒತ್ತಡವಿಲ್ಲದೆ ಪಾರದರ್ಶಕವಾಗಿ ಮಾಡಲಾಗುವುದು ಎಂದು ಕೇರಳದ ನಾದಾಪುರಂ ಕ್ಷೇತ್ರದ ಶಾಸಕ ಮತ್ತು ಕೊಡಗು ಮೈಸೂರು ಕ್ಷೇತ್ರದ ಉಸ್ತುವಾರಿ ಅಭಿಜಿತ್ ತಿಳಿಸಿದರು.
ಪಕ್ಷಕ್ಕಾಗಿ ದುಡಿದ ಯಾರೇ ಆಗಲಿ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕ ಹಾಗೂ ಪ್ರಜಾಸತ್ತಾತ್ಮಕವಾಗಿ ನಡೆಯಲಿದೆ. ಪಕ್ಷದ ಪದಾಧಿಕಾರಿಗಳು ಮತ್ತು ಮುಖಂಡರ ವೈಯಕ್ತಿಕ ಅಭಿಪ್ರಾಯಗಳನ್ನು ಗೌರವದಿಂದ ಆಲಿಸಿ, ಅವುಗಳನ್ನು ರಾಷ್ಟ್ರೀಯ ನಾಯಕತ್ವಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಕೆಪಿಸಿಸಿ ಉಪಾಧ್ಯಕ್ಷ ವೆಂಕಟೇಶ್ ಮಾತನಾಡಿ, ನಿಷ್ಠಾವಂತ ಮತ್ತು ಶ್ರಮಜೀವಿ ಕಾರ್ಯಕರ್ತರಿಗೆ ಸಂಘಟನೆಯಲ್ಲಿ ಆದ್ಯತೆ ನೀಡುವುದೇ ಈ ಅಭಿಯಾನದ ಗುರಿ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ, ಪ್ರಮುಖರಾದ ಮಮತಾ ಗಟ್ಟಿ, ಪದ್ಮನಾಭ, ಬ್ರಿಜೇಶ್ ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
