ಪೌರ ಕಾರ್ಮಿಕರ ಸೇವೆ ಅನನ್ಯವಾಗಿದ್ದು, ಅವರ ಸೇವೆಗೆ ಬೆಲೆಕಟ್ಟಲು ಸಾಧ್ಯವಿಲ್ಲ: ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯ

ಪೌರ ಕಾರ್ಮಿಕರ ಸೇವೆ ಅನನ್ಯವಾಗಿದ್ದು, ಅವರ ಸೇವೆಗೆ ಬೆಲೆಕಟ್ಟಲು ಸಾಧ್ಯವಿಲ್ಲ: ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯ

ಸೋಮವಾರಪೇಟೆ:ಪೌರ ಕಾರ್ಮಿಕರ ಸೇವೆ ಅನನ್ಯವಾಗಿದ್ದು ಅವರ ಸೇವೆಗೆ ಬೆಲೆಕಟ್ಟಲು ಸಾಧ್ಯವಿಲ್ಲ ಎಂದು ಪಟ್ಟಣದ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು. ಅವರು ಇಂದು ಪಟ್ಟಣ ಪಂಚಾಯ್ತಿ ಆವರಣದಲ್ಲಿ ಪೌರಕಾರ್ಮಿಕರನ್ನು ಭೇಟಿ ಮಾಡಿ,ಪೌರಕಾರ್ಮಿಕರ ದಿನಾಚರಣೆಯ ಶುಭಾಶಯ ತಿಳಿಸಿ ಅವರ ಯೋಗಕ್ಷೇಮ ವಿಚಾರಿಸಿದರು.

ನಿಮ್ಮ ವೃತ್ತಿಯ ಬಗ್ಗೆ ಹೆಮ್ಮೆ ಇದೆ,ಕೀಳಿರಿಮೆ ಬೇಡ ಯಾಕೆಂದರೆ ಯಾರು ಮಾಡಲು ಮುಂದೆ ಬರದಂತಹ ಸೇವೆಯನ್ನು ನೀವು ಮಾಡುತ್ತಿದ್ದೀರಿ ಎಂದು ಹೆಮ್ಮೆ ವ್ಯಕ್ತಪಡಿಸಿದರು. ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಸ್.ಮಹೇಶ್ ಪೌರ ಕಾರ್ಮಿಕರಿಗೆ ಪ್ರತಿವರ್ಷದಂತೆ ಸಿಹಿ ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್,ಅಭಿಯಂತರ ಹೇಮಂತ್ ಕುಮಾರ್,ಆರೋಗ್ಯ ನಿರೀಕ್ಷಕ ಜಾಸಿಂಖಾನ್,ಸಿಬ್ಬಂದಿ ಜೀವನ್,ಪೌರಕಾರ್ಮಿಕ ಸಂಘದ ಅಧ್ಯಕ್ಷ ಮಂಜುನಾಥ್ ಹಾಗೂ ಮುಂತಾದವರು ಹಾಜರಿದ್ದರು.