ಕೊಡಗು ಜಿಲ್ಲೆಯ ಜ್ವಲಂತ ಭೂ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳಲಿ: ಸಂಸದ ಯದುವೀರ್ ಒಡೆಯರ್
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಶಕಗಳಿಂದ ಬಗೆಹರಿಯದಿರುವ 'ಸಿ ಅಂಡ್ ಡಿ' (C&D) ವರ್ಗದ ಜಮೀನುಗಳು, ಸಿಸಿ (Cardamom Cultivation), ಪೈಸಾರಿ ಮತ್ತು ಜಮ್ಮಾ ಭೂಮಿಗಳ ಹಕ್ಕು ಹಸ್ತಾಂತರ ಹಾಗೂ ಸಕ್ರಮ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಪ್ರಸ್ತುತ ಈ ವಿಷಯವು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿರುವುದರಿಂದ, ಈ ಕುರಿತು ರಾಜ್ಯ ಸರ್ಕಾರವು ತಕ್ಷಣವೇ ದಿಟ್ಟ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ಯದುವೀರ್ ಒಡೆಯರ್ ಆಗ್ರಹಿಸಿದ್ದಾರೆ.
ಈ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರದ ಯಾವುದೇ ರೀತಿಯ ಸಹಕಾರ, ಅರಣ್ಯ ಕಾಯ್ದೆಗಳ ತಿದ್ದುಪಡಿ ಅಥವಾ ವಿಶೇಷ ಅನುಮೋದನೆಗಳ ಅಗತ್ಯವಿದ್ದಲ್ಲಿ, ತಾವು ವೈಯಕ್ತಿಕವಾಗಿ ಮುತುವರ್ಜಿ ವಹಿಸಿ ಕೇಂದ್ರದಿಂದ ಸಂಪೂರ್ಣ ಸಹಕಾರ ಕೊಡಿಸಲು ಸಿದ್ಧರಿರುವುದಾಗಿ ಸಂಸದರು ಸ್ಪಷ್ಟಪಡಿಸಿದ್ದಾರೆ. ಕೊಡಗಿನ ರೈತರು ಮತ್ತು ಸಾರ್ವಜನಿಕರು ದಶಕಗಳಿಂದ ಈ ಭೂ ಸಮಸ್ಯೆಗಳಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರವು ಕೂಡಲೇ ಕ್ರಮ ಕೈಗೊಂಡು ಶಾಶ್ವತ ಪರಿಹಾರ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
