ಪೆರಾಜೆಯಲ್ಲಿ ನೂತನ BSNL ಟವರ್ ಕಾಮಗಾರಿ ಪೂರ್ಣ
ಮಡಿಕೇರಿ:ಕೊಡಗು ಜಿಲ್ಲೆಯ ಪೆರಾಜೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಬಿ.ಎಸ್.ಎನ್.ಎಲ್ ಟವರ್ ಕಾಮಗಾರಿಯು ಪೂರ್ಣಗೊಂಡಿದ್ದು ಸೋಲಾರ್ ಪ್ಯಾನೆಲ್ ಅಳವಡಿಕೆ ಕಾರ್ಯವು ಪೂರ್ಣಗೊಂಡಿದೆ.ಒಂದು ವಾರದಲ್ಲಿ ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಳ್ಳುವುದಾಗಿ ಎಂದು ಅಧಿಕಾರಿಗಳು ವರದಿ ನೀಡಿದ್ದಾರೆ ಎಂದು ಕೊಡಗು-ಮೈಸೂರು ಸಂಸದರಾದ ಯದುವೀರ್ ಒಡೆಯರ್ ಅವರ ಕಛೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.