ಜಿಲ್ಲೆಯಲ್ಲಿ ಗೃಹಬಳಕೆ ಎಲ್‍ಪಿಜಿ ಸಿಲಿಂಡರ್‍ಗಳು ಸಮರ್ಪಕ ಸಂಗ್ರಹವಿದ್ದು, ಗೃಹ ಬಳಕೆಯ ಅನಿಲ ಸಿಲಿಂಡರ್‍ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಿಲ್ಲ;ಜಿಲ್ಲಾಧಿಕಾರಿ ಎಸ್.ಜಿ ಸೋಮಶೇಖರ್

Mar 17, 2026 - 00:28
Mar 17, 2026 - 00:29
 0  147
ಜಿಲ್ಲೆಯಲ್ಲಿ ಗೃಹಬಳಕೆ ಎಲ್‍ಪಿಜಿ ಸಿಲಿಂಡರ್‍ಗಳು ಸಮರ್ಪಕ ಸಂಗ್ರಹವಿದ್ದು, ಗೃಹ ಬಳಕೆಯ ಅನಿಲ ಸಿಲಿಂಡರ್‍ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಿಲ್ಲ;ಜಿಲ್ಲಾಧಿಕಾರಿ ಎಸ್.ಜಿ ಸೋಮಶೇಖರ್
DC

ಮಡಿಕೇರಿ :-ಜಿಲ್ಲೆಯಲ್ಲಿ ಗೃಹಬಳಕೆ ಎಲ್‍ಪಿಜಿ ಸಿಲಿಂಡರ್‍ಗಳು ಸಮರ್ಪಕ ಸಂಗ್ರಹವಿದ್ದು, ಗೃಹ ಬಳಕೆಯ ಅನಿಲ ಸಿಲಿಂಡರ್‍ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಗ್ರಾಹಕರುಗಳು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಯಾವುದೇ ಆತಂಕಕ್ಕೆ ಒಳಗಾಗದೇ ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಬುಕ್ ಮಾಡಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬಹುದು.

ಅಡುಗೆ ಅನಿಲವನ್ನು ಮಿತ ಬಳಕೆ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್‍ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. 

ಗೃಹ ಬಳಕೆ ಗ್ಯಾಸ್ ಸಿಲಿಂಡರ್‍ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿದ್ದು, ಎಂದಿನಂತೆ ಎಲ್‍ಪಿಜಿ ವಿತರಕರು ಗ್ರಾಹಕರ ಮನೆ ಬಾಗಿಲಿಗೆ ಸರಬರಾಜು ಮಾಡಲಿದ್ದಾರೆ. ಈ ಬಗ್ಗೆ ಜಿಲ್ಲೆಯ ಎಲ್ಲಾ ಎಲ್‍ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. 

ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಅಗತ್ಯವಿರುವ ಪ್ರಮಾಣದಲ್ಲಿ ಗ್ಯಾಸ್ ಸಿಲಿಂಡರ್ ಪಡೆಯಬಹುದು. ಗೃಹ ಬಳಕೆಯ ಎಲ್‍ಪಿಜಿ ಗ್ಯಾಸ್ ಸಿಲಿಂಡರ್‍ಗಳ ವಿತರಣೆಯಲ್ಲಿ ಏನಾದರೂ ಕುಂದುಕೊರತೆಗಳು ಕಂಡುಬಂದಲ್ಲಿ ಪರಿಹರಿಸಲು ಉಪ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಕಚೇರಿಯಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ, ಪರಿಹಾರ ಕಂಡುಕೊಳ್ಳಬಹುದು. 

ಉಪ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ ದೂ.ಸಂ.9845706980, ಮಾರಾಟ ವ್ಯವಸ್ಥಾಪಕರು(ಎಲ್‍ಪಿಜಿ)-ಐಒಸಿ 9585515389, ಮಾರಾಟ ವ್ಯವಸ್ಥಾಪಕರು(ಎಲ್‍ಪಿಜಿ)-ಬಿಪಿಸಿ ದೂ.ಸಂ.9853735944 ಮತ್ತು ಸಹಾಯಕ ಮಾರಾಟ ವ್ಯವಸ್ಥಾಪಕರು(ಎಲ್‍ಪಿಜಿ)-ಎಚ್‍ಪಿಸಿ 7001642556, ತಾಲ್ಲೂಕು ಕಚೇರಿ ಮಡಿಕೇರಿ 9480544531, ವಿರಾಜಪೇಟೆ 8105072869, ಸೋಮವಾರಪೇಟೆ 9480072632, ಕುಶಾಲನಗರ 9380032721 ಹಾಗೂ ಪೊನ್ನಂಪೇಟೆ 9108940875 ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದು. 

        ಯಾವುದೇ ಅನಧಿಕೃತ ಗ್ಯಾಸ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955, Petroleum Products (Maintenance of Production, Storage and Supply) Order 1999 ಹಾಗೂ LPG Control Order 2000 ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಹಕರಿಸಿ ಗೃಹಬಳಕೆ ಗ್ಯಾಸ್ ಸಿಲಿಂಡರ್ ವಿತರಣೆಯ ವ್ಯವಸ್ಥೆ ಸುಗಮವಾಗಿ ನಡೆಯಲು ಸಹಕರಿಸುವಂತೆ ವಿನಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0