Kodagu

ಸೆ.17 ರಂದು ಈ ಭಾಗದಲ್ಲಿ ಕರೆಂಟ್ ಇರಲ್ಲ‌

admincoorgdaily

ಮಡಿಕೇರಿ:-66/11ಕೆ.ವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಫ್2 ಶಾಂತಳ್ಳಿ ಫೀಡರ್ ಮಾರ್ಗದಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಸೆಪ್ಟೆಂಬರ್, 17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಯಡೂರು, ತಲ್ತಾರೆ ಶೆಟ್ಟಳ್ಳಿ, ಕೂತಿ, ಹೊಸಬೀಡು, ಕಲ್ಕಂದೂರು, ಬಸವನಕಟ್ಟೆ, ನಗರಳ್ಳಿ, ಹೆಮ್ಮನಗದ್ದೆ, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹೆಗ್ಗಡೆ ಮನೆ, ಹರಗ,ಕುಂಬಾರಗಡಿಗೆ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.