ತಿತಿಮತಿ: 2.5ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ತಿತಿಮತಿ: 2.5ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಪೊನ್ನಂಪೇಟೆ:ತಿತಿಮತಿ ಭಾಗಕ್ಕೆ ಇಂದು, ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸರಾಜು ಅವರೊಂದಿಗೆ ಭೇಟಿ ನೀಡಿದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ₹ 2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

 ತಿತಿಮತಿಯಿಂದ ಪಾಲಿಬೆಟ್ಟಕ್ಕೆ ತೆರಳುವ ಜಿಲ್ಲಾ ರಸ್ತೆಯು ಮಳೆಯಿಂದ ತೀವ್ರ ಹಾನಿಗೊಳಗಾಗಿದ್ದನ್ನು ಮನಗಂಡ ಶಾಸಕರು, ಮಳೆ ನಿಂತ ಕೂಡಲೇ ಕಾಮಗಾರಿ ಆರಂಭಿಸಲು ಅನುದಾನ ಒದಗಿಸಿದ್ದರು.

ಸದ್ರಿ ರಸ್ತೆಯಲ್ಲಿ ನೂರಾರು ಜನ ದಿನನಿತ್ಯ ಪ್ರಯಾಣಿಸುವುದರಿಂದ, ಕಾಮಗಾರಿ ಬಳಿಕ ಸಾರ್ವಜನಿಕರ ಅನುಕೂಲಕ್ಕೆ ಈ ರಸ್ತೆ ತೆರವುಗೊಳ್ಳಲಿದೆ. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ವಲಯ ಅಧ್ಯಕ್ಷರು ನವೀನ್, ಪಕ್ಷದ ಪ್ರಮುಖರು ಬೇನ್ನಿ, ಪಂಕಜ, ಭಸಂತ್, ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.