ಕೊಡಗಿನಲ್ಲಿ ಅಸ್ಸಾಂನವರ ಸೋಗಿನಲ್ಲಿ ಬಾಂಗ್ಲಾದೇಶ ವಲಸಿಗರು ಸಾವಿರಾರು ಸಂಖ್ಯೆಯಲ್ಲಿ ಸೇರಿಕೊಂಡಿದ್ದು,ವಲಸೆ ಕಾರ್ಮಿಕರ ದಾಖಲಾತಿ ಸಂಗ್ರಹಿಸಲು ಪೊಲೀಸ್ ಇಲಾಖೆ ಕ್ರಮಕೈಗೊಳ್ಳಬೇಕು:ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ
ಮಡಿಕೇರಿ: ಕೊಡಗಿನಲ್ಲಿ ಅಸ್ಸಾಂನವರ ಸೋಗಿನಲ್ಲಿ ಬಾಂಗ್ಲಾದೇಶ ವಲಸಿಗರು ಸಾವಿರಾರು ಸಂಖ್ಯೆಯಲ್ಲಿ ಸೇರಿಕೊಂಡಿದ್ದು, ಅಕ್ರಮ ವಲಸಿಗರಿಂದ ಕೊಡಗು ತನ್ನ ಶಾಂತಿ ಮತ್ತು ನೆಮ್ಮದಿಯನ್ನು ಕಳೆದುಕೊಳ್ಳಲಿದೆ ಎಂದು ಆತಂಕ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ ಅವರು, ವಲಸೆ ಕಾರ್ಮಿಕರ ದಾಖಲಾತಿ ಸಂಗ್ರಹಿಸಲು ಪೊಲೀಸ್ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂಬಂಧ ಕೊಡಗು ಮೈಸೂರು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ರವರು ಕೇಂದ್ರ ಗೃಹಸಚಿವ ಅಮಿತ್ ಷಾರವರ ಗಮನ ಸೆಳೆದಿದ್ದು, ಕೊಡಗಿನ ಈ ಗಂಭೀರ ಸಮಸ್ಯೆಯನ್ನು ಅರಿತ ಗೃಹ ಸಚಿವರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದರು. ಕೊಡಗಿನ ಕಾಫಿ ತೋಟಗಳಲ್ಲಿ ಹೋಟೆಲ್, ರೆಸಾರ್ಟ್‌ಗಳಲ್ಲಿ, ಗಾರೆ ಕೆಲಸ, ಟೈಲ್ಸ್ ಕೆಲಸದಲ್ಲಿ ತೊಡಗಕೊಂಡಿದ್ದಾರೆ. ಈ ರೀತಿಯ ವಿವಿಧ ವೃತ್ತಿಯಲ್ಲಿ ತೊಡಗಿಕೊಂಡಿರುವ ಈ ವಲಸಿಗರ ಬಗ್ಗೆ ಕೊಡಗಿನ ಜನತೆ ಮತ್ತು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕ್ರಮಕೈಗೊಳ್ಳಬೇಕು. ಕೆಲವು ವರ್ಷಗಳಿಂದ ಕೊಡಗಿನಲ್ಲಿ ಗಾಂಜಾ ಮಾರಾಟ, ಗೋ ಮಾಂಸ ಮಾರಾಟ ಪ್ರಕಟರಗಳಲ್ಲಿ ನಡೆಯುತ್ತಿದೆ. ಪೊಲೀಸ್ ಇಲಾಖೆ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಿ ಇಂತಹ ವ್ಯಕ್ತಿಗಳನ್ನು ಜಿಲ್ಲೆ ರಾಜ್ಯ ಮತ್ತು ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿಲನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರರಾದ ಅರುಣ್ ಕುಮಾರ್, ತಳೂರು ಕಿಶೋರ್, ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ ಇದ್ದರು.