ಪ್ರೀತಿಯ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮೂವರು ಬಂಧನ

Dec 18, 2025 - 22:42
Dec 19, 2025 - 09:22
 0  2.2k
ಪ್ರೀತಿಯ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮೂವರು ಬಂಧನ

ರಾಮನಗರ, ಡಿಸೆಂಬರ್ 18:19 ವರ್ಷದ ವಿದ್ಯಾರ್ಥಿನಿಯನ್ನು ಪ್ರೀತಿಯ ನೆಪದಲ್ಲಿ ಮೋಸಗೊಳಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಡಿ ಮಾಗಡಿ ಪೊಲೀಸ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ವಿಕಾಸ್, ಪ್ರಶಾಂತ್ ಮತ್ತು ಚೇತನ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ವಿಕಾಸ್ ಪರಿಚಯ ಮಾಡಿಕೊಂಡು ಪ್ರೀತಿಯ ಭರವಸೆ ನೀಡಿದ್ದಾನೆ. ನಂತರ ಆಕೆಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿ, ಅದರ ದೃಶ್ಯಗಳನ್ನು ಮೊಬೈಲ್‌ ಫೋನ್‌ನಲ್ಲಿ ದಾಖಲಿಸಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದಾನೆ ಎಂಬ ಆರೋಪವಿದೆ.

ಮೂರು ತಿಂಗಳ ಹಿಂದೆ ದಾಖಲಿಸಿಕೊಂಡ ವಿಡಿಯೋವನ್ನು ತೋರಿಸಿ, ತಾನು ಕರೆದಾಗಲೆಲ್ಲ ಬರಬೇಕು ಎಂದು ಒತ್ತಡ ಹಾಕಿದ್ದಾನೆ ಎನ್ನಲಾಗಿದೆ. ನಂತರ ವಿಕಾಸ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಸೇರಿಕೊಂಡು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಿದ್ಯಾರ್ಥಿನಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

What's Your Reaction?

Like Like 0
Dislike Dislike 0
Love Love 3
Funny Funny 3
Angry Angry 0
Sad Sad 6
Wow Wow 0