ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಯುವಕರು ಮೃತ್ಯು

Dec 18, 2025 - 12:55
 0  692
ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಯುವಕರು ಮೃತ್ಯು

ಕೊಪ್ಪಳ, ಡಿಸೆಂಬರ್ 17: ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಸಮೀಪ ಬೊಲೆರೊ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹದಿಹರೆಯದ ಮೂವರು ಯುವಕರು ಮೃತಪಟ್ಟಿದ್ದಾರೆ.

ಮೃತರನ್ನು ವಾಜಿದ್ (17), ರಾಜಾಹುಸೇನ್ (17) ಹಾಗೂ ಆಸೀಫ್ (18) ಎಂದು ಗುರುತಿಸಲಾಗಿದೆ. ವಾಜಿದ್ ಮತ್ತು ರಾಜಾಹುಸೇನ್ ಕೊಪ್ಪಳ ತಾಲೂಕಿನ ಹೊಸಹಳ್ಳಿ ನಿವಾಸಿಗಳಾಗಿದ್ದು, ಆಸೀಫ್ ಗಂಗಾವತಿ ತಾಲೂಕಿನ ಶ್ರೀರಾಮನಗರ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀರಾಮನಗರದಿಂದ ಹೊಸಹಳ್ಳಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಬಳಿಕ ಬೊಲೆರೊ ವಾಹನ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ಘಟನೆ ಸಂಬಂಧ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

What's Your Reaction?

Like Like 1
Dislike Dislike 0
Love Love 1
Funny Funny 0
Angry Angry 0
Sad Sad 3
Wow Wow 0