"ಸಮಯ ಓಡುತ್ತಿದೆ... ನಾವೂ ಓಡೋಣ: ಮೈಸೂರು ಮ್ಯಾರಥಾನ್ ನಲ್ಲಿ ಭಾಗವಹಿಸಿದ ಸಂಸದ ಯದುವೀರ್ ಒಡೆಯರ್

"ಸಮಯ ಓಡುತ್ತಿದೆ... ನಾವೂ ಓಡೋಣ: ಮೈಸೂರು ಮ್ಯಾರಥಾನ್ ನಲ್ಲಿ ಭಾಗವಹಿಸಿದ ಸಂಸದ ಯದುವೀರ್ ಒಡೆಯರ್

ಮೈಸೂರು:ಭಾನುವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎನ್‌ಇಬಿ ಸ್ಪೋರ್ಟ್ಸ್ ಆ್ಯಂಡ್‌ ಎಂಟರ್‌ಟೈನ್‌ಮೆಂಟ್ ಲಿಮಿಟೆಡ್, ಭಾರತೀಯ ಅಂಚೆ, ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 'ಮೈಸೂರು ಮ್ಯಾರಥಾನ್ - 2025'ರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡುˌ ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಅವರು,ಯುವಕರಲ್ಲಿ ಆರೋಗ್ಯದ ಕುರಿತು ಜಾಗೃತಿ ಮೂಡಿಸಲು ಭಾಗವಹಿಸಿದ ಓಟಗಾರರೊಂದಿಗೆ ಹೆಜ್ಜೆ ಹಾಕಿ 10 ಕಿ.ಮೀ ದೂರದ ಸ್ಪರ್ಧೆಯಲ್ಲಿ ಓಡಿದರು.