ಮಾಲ್ದಾರೆ ಶ್ರೀ ಸಿದ್ದೇಶ್ವರ ದೇವಾಲಯದ ಬಳಿ ಗೋರಿ ನಿರ್ಮಾಣ ಪ್ರಕರಣ:ಪಿರಿಯಾಪಟ್ಟಣದ ಮುಜಾಮಿಲ್ ಮೇಲೆ ಪ್ರಕರಣ ದಾಖಲು
ಸಿದ್ದಾಪುರ, ಜು. 28: ಮಾಲ್ದಾರೆ ಸಮೀಪದ ಗದ್ದಿಗೆ ಬೆಟ್ಟದಲ್ಲಿರುವ ಶ್ರೀ ಸಿದ್ದೇಶ್ವರ ದೇವಾಲಯದ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಕ್ರಮ ಚಟುವಟಿಕೆ ನಡೆಸಿದ ಆರೋಪದ ಅಡಿಯಲ್ಲಿ ಕುಶಾಲನಗರ ವಲಯ ಅರಣ್ಯ ಅಧಿಕಾರಿ ಅವರು ನ್ಯಾಯಾಲಯದಿಂದ ಅನುಮತಿ ಪಡೆದು ಅಕ್ರಮ ಪ್ರವೇಶ ಮಾಡಿದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ದುಬಾರೆ ಮೀಸಲು ಅರಣ್ಯದ ಗದ್ದಿಗೆ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಅಕ್ರಮ ಚಟುವಟಿಕೆ,ಗೋರಿ ನಿರ್ಮಾಣ ಮಾಡಿರುವ ಆರೋಪದಡಿಯಲ್ಲಿ ಕರ್ನಾಟಕ ಅರಣ್ಯ ಕಾಯ್ದೆ 1963ರ ಸೆಕ್ಷನ್ 24 ಹಾಗೂ ಕರ್ನಾಟಕ ಅರಣ್ಯ ನಿಯಮ 1969ರ ಸೆಕ್ಷನ್ 165ರ ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪದಡಿಯಲ್ಲಿ ವಿರಾಜಪೇಟೆ ತಾಲೂಕಿನ ಆಯಾನೂರು ಬೀಡು ಗ್ರಾಮದ ನಿವಾಸಿ ಮಿಜಾಬಿಲ್ ಹಾಗೂ ಇತರರ ಮೇಲೆ ಕುಶಾಲನಗರ ವಲಯ ಅರಣ್ಯ ಅಧಿಕಾರಿ ರಕ್ಷಿತ್. ಆರ್ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಭಾನುವಾರದಂದು ಮಾಲ್ದಾರೆ ಸಮೀಪದಲ್ಲಿರುವ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಅಜ್ಞಾತ ಕಿಡಿಗೇಡಿಗಳು ದೇವಾಲಯದ ಆವರಣದಲ್ಲಿ ಗೋರಿ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳು ದೇವಾಲಯದ ಆವರಣದಲ್ಲಿ ಸೋಮವಾರದಂದು ಪ್ರತಿಭಟನೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಬಂಧಿಸಬೇಕು ಎಂದು ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ದೇವಾಲಯದ ಆಡಳಿತ ಮಂಡಳಿಯು ಉಪವಿಭಾಗಾಧಿಕಾರಿ ಸಿದ್ದಾಪುರ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಓವರ್‌ನ್ನು ಸಿದ್ದಾಪುರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
What's Your Reaction?
Like
1
Dislike
1
Love
0
Funny
0
Angry
0
Sad
0
Wow
1
