ನಾಳೆ(ಜುಲೈ 25) ಕಂದಾಯ ಸಚಿವ ಕೃಷ್ಣಬೈರೇಗೌಡ ಕೊಡಗು ಜಿಲ್ಲಾ ಪ್ರವಾಸ

ನಾಳೆ(ಜುಲೈ 25)  ಕಂದಾಯ ಸಚಿವ  ಕೃಷ್ಣಬೈರೇಗೌಡ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ :-ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಜುಲೈ, 25 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಜುಲೈ, 25 ರಂದು ಬೆಳಗ್ಗೆ 11.30 ಗಂಟೆಗೆ ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ರವಿ ಎಂ. ತಿರ್ಲಾಪುರ ಅವರು ತಿಳಿಸಿದ್ದಾರೆ.