ನಾಳೆ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

Jun 13, 2026 - 16:19
 0  51
ನಾಳೆ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಮಡಿಕೇರಿ: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜೂ. 14 ರಂದು ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್ ತಿಳಿಸಿದ್ದಾರೆ.

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ಅಪರಾಹ್ನ 12 ಗಂಟೆಗೆ ಮಡಿಕೇರಿಯ ಪತ್ರಿಕಾ ಭವನದಲ್ಲಿ ಸಮಾರಂಭ ನಡೆಯಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಉದ್ಘಾಟಿಸಲಿದ್ದಾರೆ. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

 ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಹರಪಳ್ಳಿ ರವೀಂದ್ರ, ಉದ್ಯಮಿ ಅವರೆಮಾದಂಡ ಶರಣ್ ಪೂಣಚ್ಚ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್. ಸವಿತಾ ರೈ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ ಅಯ್ಯಪ್ಪ ಹಾಗೂ ರಾಷ್ಟ್ರೀಯ ಸಮಿತಿ ಸದಸ್ಯ ಪಳೆಯಂಡ ಪಾರ್ಥ ಚಿಣ್ಣಪ್ಪ ಭಾಗವಹಿಸಲಿದ್ದಾರೆ. 20 ವಿಭಾಗದ ವಾರ್ಷಿಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0