ನಾಳೆ ಐಪಣಿರ ಆಯಿಮೆ ಪಿಞ್ಞ ಕಳಿ ಪೈಪೋಟಿ
ಮಡಿಕೇರಿ:-ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಬಿದ್ದಾಟಂಡ ಕುಟುಂಬ, ನಾಲ್‍ನಾಡ್ ಪ್ಲಾಂಟರ್ಸ್ ಕ್ಲಬ್ ಅಸೋಸಿಯೇಷನ್ ಮತ್ತು ಕೊಡವ ಸಮಾಜ ಕಲ್ಚರಲ್ ಆಂಡ್ ಸ್ಪೋಟ್ಸ್ ಅಸೋಸಿಯೇಷನ್ ಇವರ ಸಹಯೋಗದಲ್ಲಿ ಆಗಸ್ಟ್, 07 ನಾಳೆ ಬೆಳಗ್ಗೆ 10 ಗಂಟೆಯಿಂದ ನಾಪೋಕ್ಲುವಿನ ಬಿದ್ದಾಟಂಡ ಬುಟ್ಟಿಯಾಕ ಗದ್ದೆಯಲ್ಲಿ “ಐಪಣಿರ ಆಯಿಮೆ ಪಿಞ್ಞ ಕಳಿ ಪೈಪೋಟಿ” ಕಾರ್ಯಕ್ರಮ ನಡೆಯಲಿದೆ. ಶಾಲೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ರಾಜ್ಯ ಕೃಷಿ ಸಚಿವರಾದ ಚೆಲುವರಾಯ ಸ್ವಾಮಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಹಾಗೂ ನಾಪೋಕ್ಲು ಗ್ರಾ.ಪಂ.ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೊಡಗು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಕೆ.ಡಿ.ಪಿ ನಿರ್ದೇಶಕರು, ನಾಲ್‍ನಾಡ್ ಪ್ಲಾಂಟರ್ಸ್ ಕ್ಲಬ್ ಅಸೋಸಿಯೇಷನ್ ಹಾಗೂ ಸಮಾಜ ಸೇವಕರಾಗಿರುವ ಬಾಚಮ್ಮಂಡ ಲವ ಚಿಣ್ಣಪ್ಪ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷರು ಮತ್ತು ನಿವೃತ್ತ ನಬಾರ್ಡ್ ಸಹಾಯಕ ಪ್ರಧಾನ ವ್ಯವಸ್ಥಾಪಕರು ಮುಂಡಂಡ ಸಿ.ನಾಣಯ್ಯ, ಕಾಫಿ ಪ್ಲಾಂಟರ್ ಬಿದ್ದಾಟಂಡ ಜೀವನ್ ತಿಮ್ಮಯ್ಯ, ಬಿದ್ದಾಟಂಡ ಕುಟುಂಬದ ಅಧ್ಯಕ್ಷರಾಗಿರುವ ಬಿದ್ದಾಟಂಡ ಕಾರ್ಯಪ್ಪ, ಕೊಡವ ಕಲ್ಚರಲ್ ಅಂಡ್ ಸ್ಪೋಟ್ಸ್ ಅಸೋಸಿಯೇಷನ್ ಅಧ್ಯಕ್ಷರು ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಬಿದ್ದಾಟಂಡ ಎಸ್.ತಮ್ಮಯ್ಯ, ನಾಪೋಕ್ಲು ಡಿ.ಸಿ.ಸಿ. ಬ್ಯಾಂಕ್‍ನ ಉಪಾಧ್ಯಕ್ಷರು ಹಾಗೂ ನಾಪೋಕ್ಲು ವಿಎಸ್‍ಎಸ್‍ಎನ್ ಬ್ಯಾಂಕ್‍ನ ಅಧ್ಯಕ್ಷರಾಗಿರುವ ಕೇಟೋಳಿರ ಹರೀಶ್, ಕೃಷಿಕ ಹಾಗೂ ಬಲ್ಲಮಾವಟಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಮುಕ್ಕಾಟಿರ ಸುತನ್ ಸುಬ್ಬಯ್ಯ, ಕಕ್ಕಬ್ಬೆ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಕಲಿಯಂಡ ಸಂಪನ್ ಸೋಮಣ್ಣ ಮತ್ತು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಕುಡಿಯರ ಮುತ್ತಪ್ಪ ಇತರರು ಭಾಗವಹಿಸಲಿದ್ದಾರೆ. ಅಕಾಡೆಮಿಯ ಸದಸ್ಯರಾದ ಪುತ್ತರಿರ ಪಪ್ಪು ತಿಮ್ಮಯ್ಯ, ಕಂಬೆಯಂಡ ಡೀನಾ ಬೋಜಣ್ಣ, ಮೊಳ್ಳೆಕುಟ್ಟಂಡ ದಿನು ಬೋಜಪ್ಪ, ಪಾನಿಕುಟ್ಟಿರ ಕೆ.ಕುಟ್ಟಪ್ಪ, ಕುಡಿಯರ ಕಾವೇರಪ್ಪ, ಚೊಟ್ಟೆಯಂಡ ಎ.ಸಂಜು ಕಾವೇರಪ್ಪ ಮತ್ತು ನಾಪಂಡ ಸಿ. ಗಣೇಶ್ ಅವರುಗಳು ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಕಾಡೆಮಿಯ ಎಲ್ಲಾ ಸದಸ್ಯರುಗಳು ಭಾಗವಹಿಸಲಿದ್ದಾರೆ.