Kodagu

ಪ್ರವಾಸಿ ಬಸ್ ಅಪಘಾತ:ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, ಹಲವರಿಗೆ ಗಾಯ

admincoorgdaily

ಪ್ರವಾಸಿ ಬಸ್ ಅಪಘಾತ:ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, ಹಲವರಿಗೆ ಗಾಯ

ಸೋಮವಾರಪೇಟೆ: ಕೊಡಗು ಪ್ರವಾಸಕ್ಕೆ ದಾವಣಗೆರೆಯಿಂದ ಆಗಮಿಸಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸೋಮವಾರಪೇಟೆ ತಾಲೂಕಿನ ಕುಮಾರಳ್ಳಿ–ಬಾಚಳ್ಳಿ ಬಳಿ ನಡೆದಿದೆ. ಕೊಡಗಿನ ಪ್ರವಾಸಿ ತಾಣಗಳಿಗೆ ತೆರಳುತ್ತಿದ್ದ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿಕೊಂಡಿದೆ.

 ಅಪಘಾತದ ಪರಿಣಾಮ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಬಸ್‌ನಲ್ಲಿದ್ದ ಗಾಯಾಳುಗಳನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಳಿಕ ಗಾಯಾಳುಗಳನ್ನು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ರವಾನಿಸಲಾಯಿತು. ಅಪಘಾತಕ್ಕೆ ಬಸ್ ಚಾಲಕನ ನಿಯಂತ್ರಣ ತಪ್ಪಿರುವುದೇ ಕಾರಣ ಎನ್ನಲಾಗುತ್ತಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.