ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶಾಂತಳ್ಳಿ ವಲಯ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ
ಸೋಮಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲ್ಲೂಕಿನ ಶಾಂತಳ್ಳಿ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಈಚೆಗೆ ಯೋಜನಾ ಕಚೇರಿಯಲ್ಲಿ ನಡೆಸಲಾಯಿತು.
ಬಜೆಗುಂಡಿ ಗ್ರಾಮದ ಒಕ್ಕೂಟದ ಅಧ್ಯಕ್ಷೆ ಎ.ಆರ್. ದಿವ್ಯ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಜನರ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದರು. ಯೋಜನೆಯ ಜಿಲ್ಲಾ ನಿರ್ದೇಶಕ ವಿಠಲ ಸಾಲ್ಯಾನ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಹಿನ್ನೆಲೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಬಡಜನರ ಉನ್ನತಿಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳನ್ನು ಅರ್ಹ ಜನರಿಗೆ ತಲುಪಿಸುವಲ್ಲಿ ಸಂಸ್ಥೆಯ ಸಿಬ್ಬಂದಿ ಹಾಗೂ ಸಂಘದ ಪದಾಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದರು.
ಸಂಸ್ಥೆಯ ಉದ್ದೇಶ, ಪದಾಧಿಕಾರಿಗಳ ನಾಯಕತ್ವ ಗುಣ, ಮಾಸಾಶನ, ಸುಜ್ಞಾನ ನಿಧಿ ಶಿಷ್ಯವೇತನ, ಜನಮಂಗಲ, ಸಮುದಾಯ ಅಭಿವೃದ್ಧಿ ಸೇರಿದಂತೆ ವಿವಿಧ ಸಮಾಜಮುಖಿ ಹಾಗೂ ಅನುದಾನಿತ ಕಾರ್ಯಕ್ರಮಗಳ ಕುರಿತು ತರಬೇತಿ ನೀಡಲಾಯಿತು.
ತಾಲ್ಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಮಾತನಾಡಿ, ಪದಾಧಿಕಾರಿಗಳು ಸಂಘಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಪರಿಶೀಲಿಸಬೇಕಾದ ದಾಖಲೆಗಳು ಹಾಗೂ ಉತ್ತಮ ನಾಯಕತ್ವಕ್ಕೆ ಅಗತ್ಯವಿರುವ ಗುಣಲಕ್ಷಣಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.
ಮೇಲ್ವಿಚಾರಕಿ ಪವಿತ್ರಾಕ್ಷಿ ಒಕ್ಕೂಟ ಸಭೆಯ ನಿರ್ವಹಣೆ, ಪದಾಧಿಕಾರಿಗಳ ಜವಾಬ್ದಾರಿ, ಬಡ್ಡಿದರ ಲೆಕ್ಕಾಚಾರ ಹಾಗೂ ಮರುಪಾವತಿ ಚೀಟಿಯ ಮಹತ್ವದ ಕುರಿತು ಮಾಹಿತಿ ನೀಡಿದರು. ಆಂತರಿಕ ಲೆಕ್ಕಪರಿಶೋಧಕಿ ರೂಪ ಅವರು ಸಂಘಗಳ ಗ್ರೇಡಿಂಗ್ ಹಾಗೂ ನಿರ್ಣಯ ಪುಸ್ತಕ ನಿರ್ವಹಣೆ ಕುರಿತು ತರಬೇತಿ ನೀಡಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
