ಅ.17 ರಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಕೊಡಗು ಜಿಲ್ಲಾ ಪ್ರವಾಸ
ಮಡಿಕೇರಿ:-ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಅಕ್ಟೋಬರ್, 17 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಅಕ್ಟೋಬರ್, 17 ರಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ನಡೆಯುವ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಅವರು ತಿಳಿಸಿದ್ದಾರೆ.