ಕೊಡಗು ಜಿಲ್ಲೆಯಲ್ಲಿ ಜೂನ್ 30ರವರೆಗೆ ಮರ ದಿಮ್ಮಿಗಳ ಸಾಗಾಟಕ್ಕೆ ಅವಕಾಶ

ಕೊಡಗು ಜಿಲ್ಲೆಯಲ್ಲಿ ಜೂನ್ 30ರವರೆಗೆ ಮರ ದಿಮ್ಮಿಗಳ ಸಾಗಾಟಕ್ಕೆ ಅವಕಾಶ

ಕೊಡಗಿನಲ್ಲಿ ಮಡಿಕೇರಿ, ಜೂ. 24: ಮುಂಗಾರು ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಭೂಕುಸಿತ ತಡೆಯಲು ಕೊಡಗು ಜಿಲ್ಲೆಯಾದ್ಯಂತ ಭಾರೀ ವಾಹನ ಸಂಚಾರ ನಿಷೇಧವನ್ನು ಜೂನ್ 30ರವರೆಗೆ ವಿಸ್ತರಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಜೂನ್ 10ರಿಂದ ಜುಲೈ 9ರವರೆಗೆ ಮರಳು, ಮರದ ದಿಮ್ಮಿ ಸಾಗಣೆ ಹಾಗೂ ಭಾರೀ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು.ನಂತರ ಜಿಲ್ಲೆಯ ಹವಾಮಾನ ಪರಿಸ್ಥಿತಿ ಅವಲೋಕಿಸಿ ಜೂನ್ 25ರವರೆಗೆ ಎಲ್ಲಾ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು.

ಪ್ರಸ್ತುತ ಮಳೆಯ ಪ್ರಮಾಣ ಹೆಚ್ಚಾಗಿದ್ದು, ನೆಲದಲ್ಲಿ ತೇವಾಂಶ ಅಧಿಕವಾಗಿರುವುದರಿಂದ ಭಾರೀ ವಾಹನ ಸಂಚಾರದಿಂದ ಭೂಕುಸಿತ ಉಂಟಾಗಿ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ರಸ್ತೆ, ಸಾರ್ವಜನಿಕ ಆಸ್ತಿ-ಪಾಸ್ತಿ ರಕ್ಷಣೆ ಹಾಗೂ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ವಿಧಿ 31ರ ಅಡಿ ಜಿಲ್ಲಾ ದಂಡಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ನಿಷೇಧವನ್ನು ಜೂ. 30ರವರೆಗೆ ವಿಸ್ತರಿಸಿದ್ದಾರೆ.