ಹಗ್ಗ ಜಗ್ಗಾಟ ಸ್ಪರ್ಧೆ: ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಹಗ್ಗ ಜಗ್ಗಾಟ ಸ್ಪರ್ಧೆ: ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು : ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರೌಢಶಾಲಾ ವಿಭಾಗದ ಬಾಲಕರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ನಾಲ್ಕುನಾಡು ಪ್ಲಾಂಟರ್ಸ್ ಕ್ಲಬ್ ಅಸೋಸಿಯೇಷನ್, ಬಿದ್ದಾಟಂಡ ಕುಟುಂಬ ಹಾಗೂ ಕೊಡವ ಸಮಾಜ ಸಂಸ್ಕೃತಿ ಮತ್ತು ಕ್ರೀಡಾ ಅಸೋಸಿಯೇಷನ್ ಇವರ ಸಹಯೋಗದಲ್ಲಿ ನಾಪೋಕ್ಲು ವಿನ ಬಿದ್ದಾಟಂಡ ಕುಟುಂಬಸ್ಥರ ಗದ್ದೆಯಲ್ಲಿ ಆಯೋಜಿಸಲಾಗಿದ್ದ "ಐಪಣಿರ ಅಯಿಮೆ ಪಿಂಞ್ಞ ಕಳಿ ಪೈಪೋಟಿ" ಕಾರ್ಯಕ್ರಮದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಇಲ್ಲಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳನ್ನು ಮಣಿಸಿ ಪ್ರಥಮ ಸ್ಥಾನ ಪಡೆದು ಟ್ರೋಫಿಯನ್ನು ತನ್ನದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.