ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ 146ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿದ ಶಾಸಕದ್ವಯರು
ಸಿದ್ದಾಪುರ:ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ 146 ನೇ ವಾರ್ಷಿಕ ಸಮ್ಮೇಳನದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಹಾಗೂ ಶಾಸಕರಾದ ಡಾ.ಮಂತರ್ ಗೌಡ ಅವರು ಭಾಗವಹಿಸಿದರು.
ಕಾರ್ಯಕ್ರಮದ ಉದ್ಘಾಟನೆ ಬಳಿಕ ಮಾತನಾಡಿದ ಶಾಸಕರಾದ ಎಎಸ್ ಪೊನ್ನಣ್ಣ, ಶತಮಾನಗಳಿಗೂ ಅಧಿಕವಾದ ಇತಿಹಾಸವುಳ್ಳ ಕೂರ್ಗ್ ಪ್ಲಾಂಟೇಶನ್ ಅಸೋಸಿಯೇಷನ್, ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊಡಗಿನ ಬೆಳೆಗಾರರಿಗೆ ಅನುಕೂಲ ಆಗುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು. ವಿರಾಜಪೇಟೆ ತಾಲೂಕು ಸಿದ್ದಾಪುರದ ಆರೆಂಜ್ ಕೌಂಟಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ,ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಪ್ಲಾಂಟರ್ ಅಸ್ಸೋಸಿಯೇಷನ್ ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಆಹ್ವಾನಿತ ಗಣ್ಯರು ಉಪಸ್ಥಿತರಿದ್ದರು.
