ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರಿಗೆ ಭಾವಪೂರ್ಣ ನಮನ ಸಲ್ಲಿಸಿದ ಶಾಸಕದ್ವಯರು

Aug 17, 2026 - 16:05
 0  22
ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರಿಗೆ ಭಾವಪೂರ್ಣ ನಮನ ಸಲ್ಲಿಸಿದ ಶಾಸಕದ್ವಯರು

ಮಡಿಕೇರಿ;

ಭಾರತ ಸ್ವಾತಂತ್ರ್ಯದ 80 ನೇ ವರ್ಷಾಚರಣೆಯ ಸಂದರ್ಭದಲ್ಲಿ ಆಗಸ್ಟ್ 15ರಂದು ಯುನೈಟೆಡ್ ಕೊಡವ ಆರ್ಗನೈಜೇಷನ್ (ಯುಕೊ) ಹಾಗು ಮೂರ್ನಾಡು ಕೊಡವ ಸಮಾಜದ ಸಹಯೋಗದಲ್ಲಿ ಅಯೋಜಿಸಿದ್ದ ”ನೆಪ್ಪುರ ನಳತ್ ಮಾಂಜತ ಮೊಟ್ಟ್" ಎಂಬ ವಿಶೇಷ ಕಾರ್ಯಕ್ರಮದಲ್ಲಿ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟೀರ ಪೊನ್ನಣ್ಣ, ಹಾಗು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಕೊಡಗಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಪುಷ್ಪ ನಮನ ಸಲ್ಲಿಸಿ ವಿಶೇಷ ಗೌರವ ಸಮರ್ಪಿಸಿದರು.

ಇದೇ ಸಂಧರ್ಭ, ಏರ್ಪಡಿಸಿದ್ದ “ನೆಪ್ಪುರ ಚೊಪ್ಪು ಎಂಬ ”ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ನಿಸ್ವಾರ್ಥ ಬದುಕು ಹಾಗು ಅವರ ತ್ಯಾಗ ಬಲಿದಾನಗಳನ್ನು ಮೆಲುಕು ಹಾಕುವ ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಿದ ಶಾಸಕದ್ವಯರು, - ನಮ್ಮ ಇಂದಿನ ನೆಮ್ಮದಿಯ ಬದುಕಿಗೆ ಈ ನಾಡಿನ ಹಿರಿಯರ ತ್ಯಾಗ ಬಲಿದಾನಗಳೇ ಮೂಲ ಕಾರಣ. ಈ 

ಸ್ವಾತಂತ್ರ್ಯ ದಿನದಂದು ಅವರ ತ್ಯಾಗ ಬಲಿದಾನಗಳನ್ನು ನೆನಪಿಸುವ, ಇತಿಹಾಸದ ಮಹತ್ವವನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅದ್ಭುತ ಪರಿಕಲ್ಪನೆಯ ಇಂತಹಾ ಅರ್ಥಪೂರ್ಣ ಹಾಗು ಭಾವನಾತ್ಮಕ ಕಾರ್ಯಕ್ರಮ ಆಯೋಜಿಸಿದ ‘ಯುಕೊ’ ಹಾಗು ಮೂರ್ನಾಡು ಕೊಡವ ಸಮಾಜದ ಪ್ರಯತ್ನವನ್ನು ಶಾಸಕದ್ವಯರು ಶ್ಲಾಘಿಸಿದರು.

ನಂತರ ನಡೆದ ಕಾರ್ಯಕ್ರಮವಲ್ಲಿ ಮಾತನಾಡಿದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ. ಎಸ್. ಪೊನ್ನಣ್ಣ ಭಾರತ ಸ್ವಾತಂತ್ರ್ಯದ ಇತಿಹಾಸದಲ್ಲಿ ಕೊಡಗು ತನ್ನದೇ ಅಧ್ಯಾಯವನ್ನು ಹೊಂದಿದ್ದು, ದೇಶದ ಸ್ವಾತಂತ್ರ್ಯಕ್ಕಾಗಿ ಈ ನಾಡಿನ ಹಿರಿಯರು ತಮ್ಮ ನಿಸ್ವಾರ್ಥ ಸೇವೆಯನ್ನು ನೀಡಿದ್ದಾರೆ, ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗಮಾಡಿದ ಹೋರಾಟಗಾರರನ್ನು ಕೊಡಗು ನಮ್ಮ ದೇಶಕ್ಕೆ ನೀಡಿದೆ. 

ಆದರೆ ಇಲ್ಲಿಯವರೆಗೆ ಅವರಿಗೆ ಸೂಕ್ತವಾದ ಗೌರವ ಸಿಗದಿರುವುದು ದುರಾದೃಷ್ಟಕರ. ಈ ನಿಟ್ಟಿನಲ್ಲಿ ಯುಕೊ ಕಳೆದ ವರ್ಷ ನಡೆಸಿದ ಕಾರ್ಯಕ್ರಮದಿಂದ ಪ್ರೇರಿತನಾಗಿ, ಗೋಣಿಕೊಪ್ಪ ಬಸ್ ನಿಲ್ದಾಣಕ್ಕೆ ಕೊಳ್ಳಿಮಾಡ ಕರುಂಬಯ್ಯನವರ ಹೆಸರು ನಾಮಕರಣ ಮಾಡಿ ಅದೇ ಬಸ್ ನಿಲ್ದಾಣದಲ್ಲಿ ಪಂದ್ಯಂಡ ಬೆಳ್ಯಪ್ಪನವರ ಪ್ರತಿಮೆಯನ್ನು ನಿರ್ಮಿಸುವ ಕೆಲಸವನ್ನು ಮಾಡಿದ್ದೇನೆ ಎಂದು ಎ.ಎಸ್. ಪೊನ್ನಣ್ಣ ತಿಳಿಸಿದರು. 

ಮತ್ತೋರ್ವ ಅಥಿತಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ನೆನಪಿನಂಗಳದಲ್ಲಿ ಮರಯಾಗಿ ಹೋಗಿರುವ ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ಸೇವೆ, ತ್ಯಾಗ, ಬಲಿದಾನಗಳನ್ನು ಪರಿಚಯಿಸುವ ಮಾಹಿತಿಗಳನ್ನು ಒಳಗೊಂಡ ಒಂದು ಸಮಗ್ರ ಮ್ಯೂಸಿಯಂ ಸ್ಥಾಪನೆಯಾಗಬೇಕಾದ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಮಡಿಕೇರಿಯ ಕೊಡವ ಹೆರಿಟೇಜ್ ಕೇಂದ್ರ ನಿರ್ಮಿಸಲು ಮೀಸಲಿಟ್ಟ ಸ್ಥಳದಲ್ಲಿ ಪ್ರತ್ಯೇಕವಾಗಿ ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ಮ್ಯೂಸಿಯಂ ನಿರ್ಮಿಸಲು ತಮ್ಮ ಪೂರ್ಣ ಸಹಕಾರ ನೀಡುವುದಾಗಿ ಘೋಷಿಸಿದರು.  

ಇದೇ ಸಂದರ್ಭ, ಯುಕೊ ಅದ್ಯಕ್ಷ, ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರದಿಂದ ರಾಷ್ಟ್ರ ಹಾಗು ರಾಜ್ಯ ಮಟ್ಟದಲ್ಲಿ ಕೆಲವೇ ಕೆಲವು ಹೋರಾಟಗಾರರನ್ನು ಗುರ್ತಿಸಿ ಗೌರವ ನೀಡಲಾಗುತ್ತಿದೆ. ಆದರೆ ಇಲ್ಲಿನ ನೈಜ ಹೋರಾಟಗಾರರಿಗೆ ಸ್ಥಳೀಯವಾಗಿ ಸಾರ್ವಜನಿಕರು ಹಾಗು ಸರ್ಕಾರದಿಂದ ಗೌರವ ನೀಡಿ ಸ್ಮರಿಸುವ ಕೆಲಸವಾಗಬೇಕಾಗಿದೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾಡಳಿತವು, ಸ್ಥಳೀಯವಾಗಿ ನೈಜ ಸ್ವಾತಂತ್ರ್ಯ ಹೋರಾಟಗಾರರನ್ನು, ಸತ್ಯಾಗ್ರಹಿಗಳನ್ನು ಗುರ್ತಿಸಿ ಗೌರವಿಸಿ ಸ್ಮರಿಸಬೇಕು, ಇಲ್ಲವಾದಲ್ಲಿ ಈ ಮಣ್ಣಿನ ನೈಜ ಇತಿಹಾಸಗಳು ಅಳಿಸಿಹೋಗಲಿದೆ, ಇದು ಸಮಾಜವನ್ನು ಅತ್ಯಂತ ಕೆಟ್ಟದಾದ ಪರಿಸ್ಥಿತಿಗೆ ತಳ್ಳಲು ಕಾರಣವಾಗಬಹುದಾದ ಆತಂಕವಿದೆ ಎಂದು ಹೇಳಿದರು.

ಈ ನಿಟ್ಟಿನಲ್ಲಿ, ಕೊಡಗಿನ ನೈಜ ಹೋರಾಟಗಾರರನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನದ ಭಾಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ವಿಚಾರ ವಿನಿಮಯ, ದೇಶಭಕ್ತಿ ಗೀತೆಗಳು ಹಾಗು ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನೆನಪಿನ ನೆರಳಲ್ಲಿ ಹುದುಗಿರುವ ಆ ಸ್ವಾತಂತ್ರ್ಯದ ಹೆಜ್ಜೆಗುರುತುಗಳನ್ನು ಹೊರತೆಗೆದು ಸರ್ಕಾರಕ್ಕೆ ಇದನ್ನು ನೆನಪಿಸುವ ಹಾಗು ಇಂದಿನ ಪೀಳಿಗೆಗೆ ಪರಿಚಯಿಸುವ ಒಂದು ಪ್ರಯತ್ನ ಇದಾಗಿದೆ. ಈ ಕಾರ್ಯಕ್ರಮಕ್ಕೆ ನಾಡಿನಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿರುವುದು ಸಂತಸ ತಂದಿದೆ. ಹಾಗೆಯೇ ಸುಳ್ಳು ಇತಿಹಾಸಗಳನ್ನು ಸೃಷ್ಟಿಸುವುದರಮೂಲಕ ನಮ್ಮ ನೆಲದ ಆಸ್ಮಿತೆಗೆ ದಕ್ಕೆತರುವ ಪ್ರಯತ್ನಗಳು ನಡೆಯುತ್ತಿರುವುದು ವಿಷಾದನೀಯ. 

ಈ ನಿಟ್ಟಿನಲ್ಲಿ ನೆಪ್ಪುರ ಚೊಪ್ಪು ಎಂಬ ಛಾಯಾಚಿತ್ರ ಪ್ರದರ್ಶನದ ಮೂಲಕ ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದ ಕೊಡವರ ಪಾತ್ರಗಳನ್ನು ಅನಾವರಣಗೊಳಿಸಲಾಗಿದೆ ಎಂದು ಅವರು 

ಹೇಳಿದರು.

ಕಾರ್ಯಕ್ರಮಕ್ಕೆ ಎಲ್ಲರನ್ನು ಸ್ವಾಗತಿಸಿ ಮಾತನಾಡಿದ ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ತೇಲಪಂಡ ಸುಬ್ಬಯ್ಯ, ಇಂತಹ ಒಂದು ಅರ್ಥಪೂರ್ಣ ಕಾರ್ಯಕ್ರಮವನ್ನು ನಮ್ಮ ಸಮಾಜದ ವತಿಯಿಂದ ಆಯೋಜಿಸಿರುವುದು ನಮಗೆ ಹಮ್ಮೆಯ್ನಿಸಿದೆ. ನಿರೀಕ್ಷೆಗೂ ಮೀರಿ ಜನರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ಸುಗೊಳಿಸಿರುವುದು ಸಂತಸ ತಂದಿದೆ, ಮುಂದೆಯೂ ಇಂತಹ ಅರ್ಥ ಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಕೊಡವ ಸಮುದಾಯದ ಅಸ್ಥಿತ್ವವನ್ನು ಉಳಿಸುವ ನಿಟ್ಟಿನಲ್ಲಿ ಸಂಕಲ್ಪಬದ್ಧರಾಗಿ ಕೆಲಸ ಮಾಡಲಿದ್ದೇವೆ ಎಂದು ಹೇಳಿದರು. 

“ನೆಪ್ಪುರ ಚೊಪ್ಪು”ಛಾಯಾ ಚಿತ್ರ ಪ್ರದರ್ಶನವನ್ನು, ಕೊಡಗಿನ ಗಾಂಧಿ ಪಂದ್ಯಂಡ ಬೆಳ್ಯಪ್ಪ ಹಾಗು ಸ್ವಾತಂತ್ರ್ಯ ಹೋರಾಟಗಾರ್ತಿ ಪಂದ್ಯಂಡ ಸೀತಮ್ಮ ಬೆಳ್ಯಪ್ಪರವರ ಪುತ್ರ ಪಂದ್ಯಂಡ ವಿಜಯ್ ಬೆಳ್ಯಪ್ಪ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಮನ್ ಸುಬ್ರಮಣಿ, ಬ್ರಹ್ಮಗಿರಿ ವಾರಪತ್ರಿಕೆ ಸಂಪಾದಕ ಉಳ್ಳಿಯಡ ಪೂವಯ್ಯ ಹಾಗು ಏಕೀಕರಣ ರಂಗದ ಪ್ರಮುಖರಾದ ಅಜ್ಜೀನಂಡ ತಮ್ಮೂ ಪೂವಯ್ಯ ಜಂಟಿಯಾಗಿ ಉದ್ಘಾಟಿಸಿದರು. ಇದೇ ಸಂದರ್ಭ ಪೆಮ್ಮಡಿಯಂಡ ವೇಣು ಅಪ್ಪಣ್ಣ ಸಾಂಪ್ರದಾಯಿಕವಾಗಿ ತಪ್ಪಡ್ಕವನ್ನು ಕಟ್ಟುವುದರ ಮೂಲಕ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. 

ಹೆಸರಾಂತ ಗಾಯಕರಾದ, ಚೆಕ್ಕೇರ ಪಂಚಮ್ ಬೋಪಣ್ಣ, ಬೊಟ್ಟೋಳಂಡ ಅಶಿತಾ ಬೋಪಣ್ಣ, ಪಳಂಗಂಡ ಮೇಘನಾ ನಾಚಪ್ಪ, ರೀಟಾ ನಾಚಪ್ಪ, ಜೂ.ಕಿಶೋರ್ ಕುಮಾರ್ ಖ್ಯಾತಿಯ ಮಾಳೇಟಿರ ಅಜಿತ್ ಪೂವಣ್ಣರ ದೇಶಭಕ್ತಿ ಸಾರುವ ಗೀತೆಗಳು ನೆರೆದವರ ಕಣ್ಣಾಲಿಗಳು ತೇವಗೊಳ್ಳುವಂತೆ ಮಾಡಿದವು. ಮತ್ತು ಮೂರ್ನಾಡುವಿನ ವಿವಿದ ಶಾಲೆಯ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರದರ್ಶನ ಕಾರ್ಯಕ್ರಮಕ್ಕೆ ಮೆರಗು ನೀಡಿತು. 

  ಸೋಮೆಯಂಡ ಕೌಸಲ್ಯ ಸತೀಶ್, ಪುದಿಯೊಕ್ಕಡ ಸುಜಾತ ದೇವಯ್ಯ, ಅಮ್ಮಾಟಂಡ ವಿಂದ್ಯ ದೇವಯ್ಯ, ಬಾಚೆಟ್ಟಿರ ರೇಶ್ಮ ಸುಬ್ಬಯ್ಯ ಹಾಗು ಪೆಮ್ಮಂಡ ಗೀತಾ ಪವಿತ್ರ ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ಕುರಿತು ವಿಚಾರ ಮಂಡನೆಯ ಮೂಲಕ ನುಡಿನಮನ ಸಲ್ಲಿಸಿದರು. 

ಚೆಯ್ಯಂಡ ಬನಿತ್ ಬೋಜಣ್ಣ ಹಾಗು ಕಳ್ಳಿಚಂಡ ದೀನಾ ಉತ್ತಪ್ಪ ಕಾರ್ಯಕ್ರಮವನ್ನು ನಿರೂಪಿಸಿದರು. ಮೂರ್ನಾಡು ಕೊಡವ ಸಮಾಜದ ಕಾರ್ಯದರ್ಶಿ ಚಂಗಂಡ ಸೂರಜ್ ವಂದಿಸಿದರು. 

ಕಾರ್ಯಕ್ರಮದಲ್ಲಿ, ಜಿಲ್ಲಾ ಗ್ಯಾರೆಂಟಿ ಅಸುಷ್ಠಾನ ಸಮಿತಿ ಅಥ್ಯಕ್ಷ ತೀತಿರ ದರ್ಮಜ ಉತ್ತಪ್ಪ, ವಿರಾಜಪೇಟೆ ಕೊಡವ ಸಮಾಜ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ, ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ನಾಣಯ್ಯ, ವಿವಿದ ಕೊಡವ ಸಮಾಜಗಳ ಅದ್ಯಕ್ಷರುಗಳು, ಮೂರ್ನಾಡು ಕೊಡವ ಸಮಾಜದ ಉಪಾಧ್ಯಕ್ಷ ಕೋಟೆರ ರಾಜ, ಖಜಾಂಚಿ ಅಮ್ಮಾಟಂಡ ದೇವಯ್ಯ, ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಪಳಂಗಂಡ ರೇಖ, ಕೊಡವ ತಕ್ಕ್ ಎಳ್ತ್ ಕಾರಡ ಕೂಟದ ಅಧ್ಯಕ್ಷ ಚಟ್ಟಂಗಡ ರವಿ ಸುಬ್ಬಯ್ಯ, ನಾಡು ತಕ್ಕರಾದ ಪಳಂಗಂಡ ಕೇಶು, ಕೋಟೆರ ರಷ್ಯ, ಪಳಂಗಂಡ ವಿಠಲ, ವಿವಿದ ಪೊಮ್ಮಕ್ಕಡ ಕೂಟದ ಸದಸ್ಯರುಗಳು, ವಿವಿದ ಕೊಡವ ಕೂಟಗಳ ಸದಸ್ಯರು.

ಚೇನಂಡ ಗಿರಿಶ್, ಸುರೇಶ್, ಸಮಾಜ ಸೇವಕ ಅವರೆಮಾದಂಡ ಶರಣ್, ಕೊಡವ ಸಾಹಿತ್ಯ ಅಖಾಡೆಮಿ ಸದಸ್ಯ ಚೊಟ್ಟೆಯಂಡ ಸಂಜು ಕಾವೇರಪ್ಪ, ಪುತ್ತರಿರ ಪಪ್ಪು ತಿಮ್ಮಯ್ಯ, ಫೀ.ಮಾ.ಕಾರ್ಯಪ್ಪ ಜ. ತಿಮ್ಮಯ್ಯ ಫೌಂಡೇಶನ್ ‘ನ ಪಾಲೇಂಗಡ ಅಮಿತ್ ಭೀಮಯ್ಯ, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸದಸ್ಯರು, ಹಾಗು ಗಣ್ಯರು ಹಾಗು ಯಕೊ ಸದಸ್ಯರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0