ನಾಪೋಕ್ಲುವಿನ ವಿವಿಧೆಡೆಗಳಲ್ಲಿ "ಎರಡು ಹನಿಗಳು ಪೋಲಿಯೋ ವಿರುದ್ಧ ನಿರಂತರ ಗೆಲುವು" ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಯಶಸ್ವಿ

ನಾಪೋಕ್ಲುವಿನ ವಿವಿಧೆಡೆಗಳಲ್ಲಿ  "ಎರಡು ಹನಿಗಳು ಪೋಲಿಯೋ ವಿರುದ್ಧ ನಿರಂತರ ಗೆಲುವು" ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಯಶಸ್ವಿ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು : ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನದ ಎರಡು ಹನಿಗಳು ಪೋಲಿಯೋ ವಿರುದ್ಧ ನಿರಂತರ ಗೆಲುವು ಲಸಿಕಾ ಅಭಿಯಾನದ ಪ್ರಯುಕ್ತ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರ ಮತ್ತು ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ಅಂಗನವಾಡಿ ಕೇಂದ್ರಗಳಲ್ಲಿ ಪೋಲಿಯೋ ಲಸಿಕಾ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ನಾಪೋಕ್ಲುವಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್,ವೈದ್ಯರಾದ ಡಾ. ಯೋಗೇಶ್ ಅವರು ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ಡಿ. 21ರಿಂದ24ವರೆಗೆ ನಡೆಯುವ ಎರಡು ಹನಿ ಪೋಲಿಯ ವಿರುದ್ಧ ನಿರಂತರ ಗೆಲುವು ಅಭಿಯಾನ ಕಾರ್ಯಕ್ರಮದಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪ್ರತಿಯೊಬ್ಬರು ಲಸಿಕೆ ನೀಡುವ ಮೂಲಕ ಪೋಲಿಯೋ ಮುಕ್ತ ಭಾರತಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ತಿಳಿಸಿದರು. 

ನಾಪೋಕ್ಲು ಬಳಿಯ ಬೇತು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಕಾಳೆಯಂಡ ಸಾಬ ತಿಮ್ಮಯ್ಯ, ಹಳೇ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ಪಂಚಾಯತ್ ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ ಹಾಗೂ ನಾಪೋಕ್ಲು ಪೊಲೀಸ್ ಠಾಣೆಯ ಮುಖ್ಯಪೇದೆ ರಾಮಕೃಷ್ಣ,ಕಲ್ಲುಮೊಟ್ಟೆ ಅಂಗನವಾಡಿ ಕೇಂದ್ರದಲ್ಲಿ ನಿವೃತ ಅಂಚೆ ಇಲಾಖೆ ಅಧಿಕಾರಿ ರಾಜಮ್ಮ ಅವರು ಲಸಿಕಾ ಅಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಬಳಿಕ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಕುರಿತು ಮಾಹಿತಿ ನೀಡಿದರು.ಅದರಂತೆ ಚೆರಿಯ ಪರಂಬು,ಕೋಟೇರಿ, ಕೊಳಕೇರಿ ಸೇರಿದಂತೆ ನಾಪೋಕ್ಲು ಹೋಬಳಿ ವ್ಯಾಪ್ತಿಯ ಅಂಗನವಾಡಿ ಕೇಂದ್ರದಗಳಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಪೋಲಿಯೋ ಅಭಿಯಾನದಲ್ಲಿ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳನ್ನು ಕರೆತಂದು ಅಭಿಯಾನದ ಪ್ರಯೋಜನವನ್ನು ಪಡೆದುಕೊಂಡರು.

ಈ ಸಂದರ್ಭ ಅಭಿಯಾನ ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು, ಸಹಾಯಕಿಯರು, ವಿವಿಧ ಸಂಘ-ಸಂಸ್ಥೆಗಳ ಸದಸ್ಯರು, ಪೋಷಕರು, ಪುಟಾಣಿ ಮಕ್ಕಳು ಪಾಲ್ಗೊಂಡಿದ್ದರು.