ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

Jul 29, 2026 - 13:31
 0  1.2k
ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಸುಂಟಿಕೊಪ್ಪ: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಮರ ಬಿದ್ದು ಅಸ್ಸಾಂ ಮೂಲದ ಮಹಿಳಾ ಕಾರ್ಮಿಕರಿಬ್ಬರು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಮಾದಾಪುರದ ಟಾಟಾ ಕಾಫಿ ಕಂಪನಿಗೆ ಸೇರಿದ ಜಂಬೂರು ಡಿವಿಷನ್ ನ ಬಿಳಿಗೇರಿ ಗ್ರಾಮದ ತೋಟದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಈ ದುರಂತದಲ್ಲಿ ಅಸ್ಸಾಂ ಮೂಲದ ಓರ್ವ ಮಹಿಳೆ ಮತ್ತು ಓರ್ವ ಪುರುಷ ಕಾರ್ಮಿಕರು ಗಂಭೀರವಾಗಿ ಗಾಯಗೊಂಡು ಚಿಂತಾಜನಕರಾಗಿದ್ದಾರೆ ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 2
Wow Wow 0