ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ ಇಬ್ಬರು ಬಲಿ: ಮತ್ತೆರಡು ಮಂದಿ ಸ್ಥಿತಿ ಗಂಭೀರ

Mar 29, 2026 - 23:11
 0  1k
ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ ಇಬ್ಬರು ಬಲಿ: ಮತ್ತೆರಡು ಮಂದಿ ಸ್ಥಿತಿ ಗಂಭೀರ
ಮೃತರು

ಆನೇಕಲ್​​, ಮಾರ್ಚ್​​ 29: ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ.

ವ್ಯಕ್ತಿಯೋರ್ವ ತಾಯಿ, ಅಕ್ಕ ಮತ್ತು ಅಕ್ಕನ ಮಗನ ಕತ್ತು ಸೀಳಿ, ಬಳಿಕ ತಾನೂ ಆತ್ಮಹತ್ಯೆಗೆ ಮುಂದಾಗಿದ್ದಾನೆ. ಘಟನೆಯಲ್ಲಿ ತಾಯಿ ಮತ್ತು ಅಕ್ಕ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬಾಲಕ ಸೇರಿ ಇಬ್ಬರಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

 ತಾಯಿ ಆಶಾ(55), ಅಕ್ಕ ವರ್ಷಿತಾ(34) ಮೃತರಾಗಿದ್ದು, ಮೋಹನ್ ಗೌಡ(27), ಅಕ್ಕನ ಮಗ ಮಯಾಂಕ್(11) ಸ್ಥಿತಿ ಗಂಭೀರವಾಗಿದೆ. ಸಾಲಗಾರರ ಕಾಟದಿಂದ ಮೋಹನ್​​ ಗೌಡ ತೀವ್ರವಾಗಿ ಬೇಸತ್ತಿದ್ದರು.

ಈ ಸಂಬಂಧ ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ವಿಡಿಯೋ ಮಾಡಿದ್ದ ಮೋಹನ್, ಅದನ್ನು ತನ್ನ ಸಂಬಂಧಿಕರಿಗೆ ಕೂಡ ಕಳುಹಿಸಿದ್ದರು. ವಿಡಿಯೋ ನೋಡಿ ಆತಂಕಗೊಂಡ ಸಂಬಂಧಿಕರು ಮನೆ ಬಳಿ ಬಂದಿದ್ದಾರೆ.

 ಈ ವೇಳೆ ಡೋರ್​​ ಲಾಕ್​​ ಆಗಿರೋದು ಕಂಡುಬಂದಿದ್ದು, ಬಾಗಿಲನ್ನು ಒಡೆದು ಒಳ ಹೋಗಿ ನೋಡಿದಾಗ ಎರಡು ಮೃತ ದೇಹಗಳು ಪತ್ತೆಯಾಗಿವೆ. ಜೊತೆಗೆ ಮೋಹನ್​​ ಮತ್ತು ಮಯಾಂಕ್ ನೆಲದ ನೇಲೆ ಒದ್ದಾಡುತ್ತಿರುವುದನ್ನು ಕಂಡ ಸಂಬಂಧಿಕರು ಕೂಡಲೇ ಅವರಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇವರಿಬ್ಬರಿಗೂ ಸದ್ಯ ಚಿಕಿತ್ಸೆ ಮುಂದುವರಿದಿದೆ.

 ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅತ್ತಿಬೆಲೆ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇನ್ನು ಘಟನೆ ಬಗ್ಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾತ್ ಮಾಹಿತಿ ನೀಡಿದ್ದು, ರಾತ್ತಿ 10:30ರ ಸುಮಾರಿಗೆ ಆತ್ಮಹತ್ಯೆ ಯತ್ನದ ಬಗ್ಗೆ ಮಾಹಿತಿ ಸಿಕ್ಕಿದೆ. ಕೂಡಲೇ ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅತಿಯಾದ ಸಾಲ ಘಟನೆಗೆ ಕಾರಣ ಎಂಬುದು ಗೊತ್ತಾಗಿದೆ.

ಗಾಯಾಳು ಮೋಹನ್ ಚೀಟಿ ವ್ಯವಹಾರದಲ್ಲಿ ಸಾಲ ಮಾಡಿಕೊಂಡಿದ್ದ. ಜೊತೆಗೆ ಐಷಾರಾಮಿ ಜೀವನಕ್ಕೆಂದು ದುಂದು ವೆಚ್ಚ ಮಾಡಿದ್ದು, ಸಾಲ ತೀರಿಸಲಾಗದೆ ಇಡೀ ಕುಟುಂಬ ಆತ್ಮಹತ್ಯೆಗೆ ನಿರ್ಧರಿಸಿದೆ. ಗಾಯಾಳು ಮೋಹನ್ ತಾಯಿ, ಅಕ್ಕ ಮತ್ತು ಅಕ್ಕನ ಮಗನ ಕುತ್ತಿಗೆ ಸೀಳಿ ಬಳಿಕ ತಾನು ಕುತ್ತಿಗೆ ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿರೋದು ಮೇಲ್ನೋಟಕ್ಕೆ ಕಂಡು ಬಂದಿದೆ. ಮುಂದಿನ ತನಿಖೆ ವೇಳೆ ನಿಖರ ಕಾರಣ ತಿಳಿಯಲಿದೆ ಎಂದಿದ್ದಾರೆ.

What's Your Reaction?

Like Like 0
Dislike Dislike 1
Love Love 2
Funny Funny 0
Angry Angry 0
Sad Sad 1
Wow Wow 0