ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ಪಡೆಯ ಬೆಂಗವಾಲು ವಾಹನದ ಮೇಲೆ ದಾಳಿ; ಇಬ್ಬರು ಸೈನಿಕರು ಹುತಾತ್ಮ

ಬಿಷ್ಣುಪುರ (ಮಣಿಪುರ): ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲೆ ಶಸ್ತ್ರಸಜ್ಜಿತರ ದಾಳಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು NDTV ವರದಿ ಮಾಡಿದೆ.
ಅಧಿಕೃತ ಮೂಲಗಳ ಪ್ರಕಾರ, ಗಸ್ತು ತಿರುಗುತ್ತಿದ್ದ ಅಸ್ಸಾಂ ರೈಫಲ್ಸ್ ಮೇಲೆ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದರು. ತೀವ್ರ ಗುಂಡಿನ ದಾಳಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾದರು ಎಂದು ತಿಳಿದು ಬಂದಿದೆ.
ಘಟನೆ ನಡೆದ ತಕ್ಷಣವೇ ಬಿಷ್ಣುಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆ ಬಲಪಡಿಸಲಾಗಿದ್ದು, ಸೇನೆ ಮತ್ತು ರಾಜ್ಯ ಪೊಲೀಸ್‌ಗಳು ಶೋಧ ಕಾರ್ಯಾಚರಣೆಗೆ ಕೈಗೊಂಡಿವೆ.