ಡಾ.ಮಂತರ್ ಗೌಡ ಅವರ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
admincoorgdaily

ಮಡಿಕೇರಿ; ಮಡಿಕೇರಿ ವಿಧಾನಸಭಾ ಕ್ಷೇತ್ರದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಕೋರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನಿತಿನ್ ಗಡ್ಕರಿ ರವರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಮಂತರ್ ಗೌಡ ರವರು ಮನವಿ ಸಲ್ಲಿಸಿದ್ದರು.
ಇದಕ್ಕೆ ಪೂರಕವಾಗಿ ಪ್ರತಿಕ್ರಿಯೆ ನೀಡಿದ್ದ ಸಚಿವರು ಪೂರಕ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಇದೀಗ ಮಡಿಕೇರಿ ವಿಧಾನಸಭಾ ಕ್ಷೇತ್ರ ಹಾಗೂ ಕೊಡಗು ಜಿಲ್ಲೆಯ ಪ್ರಮುಖ ರಸ್ತೆಗಳಿಗೆ 22 ಕೋಟಿ ರೂಪಾಯಿ ಅನುದಾನ ಬಿಡುಗಡೆ ಆಗಿದ್ದು, ಈ ಹಿನ್ನೆಲೆಯಲ್ಲಿ ಮಾನ್ಯ ಶಾಸಕರಾದ ಶ್ರೀ ಡಾ. ಮಂತರ್ ಗೌಡ ರವರು ಕೇಂದ್ರ ಸರ್ಕಾರದ ಮಾನ್ಯ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.