ಯುನೈಟೆಡ್ ಕೊಡವ ಸಂಸ್ಥೆಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ: ಸಂವಿಧಾನವು ಪ್ರತಿಯೊಬ್ಬ ಭಾರತೀಯನಿಗೆ ಗೌರವಯುತವಾಗಿ ಬದುಕುವ ಹಕ್ಕು ನೀಡಿದೆ:ಶಾಸಕ ಎ.ಎಸ್ ಪೊನ್ನಣ್ಣ

ಯುನೈಟೆಡ್ ಕೊಡವ ಸಂಸ್ಥೆಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ:  ಸಂವಿಧಾನವು ಪ್ರತಿಯೊಬ್ಬ ಭಾರತೀಯನಿಗೆ ಗೌರವಯುತವಾಗಿ ಬದುಕುವ ಹಕ್ಕು ನೀಡಿದೆ:ಶಾಸಕ ಎ.ಎಸ್ ಪೊನ್ನಣ್ಣ

ಪೊನ್ನಂಪೇಟೆ: ತಾಲೂಕಿನ ಯುನೈಟೆಡ್ ಕೊಡವ ಸಂಸ್ಥೆ ವತಿಯಿಂದ ಆಯೋಜಿಸಿದ 79ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

 ಸ್ವಾತಂತ್ರ್ಯೋತ್ಸವದ ಸಂದೇಶ ಸಾರುತ್ತಾ ಮಾತನಾಡಿದ ಶಾಸಕರು, ನಾಡಿನಾದ್ಯಂತ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾರತೀಯರು ತೊಡಗಿದ್ದಾರೆ. ಸ್ವಾತಂತ್ರ್ಯವನ್ನು ನಮಗೆ ದೊರಕಿಸಿಕೊಟ್ಟ ನಮ್ಮ ದೇಶದ ಎಲ್ಲಾ ಹಿರಿಕರಿಗೆ ನಾವು ಕೃತಜ್ಞರಾಗಿರಬೇಕು. ಸ್ವಾತಂತ್ರ್ಯದ ಬಳಿಕ ನಮ್ಮ ದೇಶದ ನಾಯಕರುಗಳು ಈ ದೇಶಕ್ಕೆ ನೀಡಿದ ಸಂವಿಧಾನ ಇಂದು ದೇಶವು ಇಷ್ಟು ಮುಂದುವರಿಯಲು ಕಾರಣವಾಗಿದೆ. ನಮಗೆ ಅಂದು ನಮ್ಮ ಹಿರಿಯರು ದೊರಕಿಸಿಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿಕೊಂಡು ದೇಶವನ್ನು ಮತ್ತಷ್ಟು ಬಲಿಷ್ಠ ಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬಣ್ಣಿಸಿದರು. ಈ ದೇಶದ ಸಂವಿಧಾನವು ಪ್ರತಿಯೊಬ್ಬ ಭಾರತೀಯನಿಗೆ ಗೌರವಯುತವಾಗಿ ಬದುಕುವ ಹಕ್ಕನ್ನು ನೀಡಿದೆ. ಅದನ್ನು ಗೌರವಿಸಿ ಪಾಲಿಸುವುದೇ ನಿಜವಾದ ಸ್ವಾತಂತ್ರ್ಯ ಎಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಮಾಚಯ್ಯ, ಯುನೈಟೆಡ್ ಕೊಡವ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.