ಗುಡ್ಡೆಹೊಸೂರು ಬಳಿ ಅಪರಿಚಿತ ವ್ಯಕ್ತಿಗೆ ವಾಹನ ಡಿಕ್ಕಿ: ಆಸ್ಪತ್ರೆಗೆ ದಾಖಲು
admincoorgdaily

ಕುಶಾಲನಗರ ಜು.13: ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಳಿ ಇಂದು ಬೆಳಗಿನ ಜಾವ ಸುಮಾರು 4ಗಂಟೆಗೆ ಪಾದಚಾರಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೀಡಾದ ವ್ಯಕ್ತಿಯ ಕಡೆಯವರು ಕುಶಾಲನಗರ ಟ್ರಾಫಿಕ್ ಪೊಲೀಸ್ ಠಾಣೆ ಅಥವಾ ಟೌನ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.