Kodagu

ಕಸ್ತೂರಿ ರಂಗನ್ ವರದಿ ಬಗ್ಗೆ ಜನರಲ್ಲಿ ಅನಗತ್ಯ ಭಯ ಹುಟ್ಟಿಸಲಾಗುತ್ತಿದೆ: ನಿವೃತ್ತ ಕರ್ನಲ್ ಸಿ.ಪಿ.ಮುತ್ತಣ್ಣ

admincoorgdaily

ಕಸ್ತೂರಿ ರಂಗನ್ ವರದಿ ಬಗ್ಗೆ ಜನರಲ್ಲಿ ಅನಗತ್ಯ ಭಯ ಹುಟ್ಟಿಸಲಾಗುತ್ತಿದೆ: ನಿವೃತ್ತ ಕರ್ನಲ್ ಸಿ.ಪಿ.ಮುತ್ತಣ್ಣ

ಮಡಿಕೇರಿ: ಕಸ್ತೂರಿ ರಂಗನ್ ವರದಿ ಬಗ್ಗೆ ಜನರಲ್ಲಿ ಅನಗತ್ಯ ಭಯ ಹುಟ್ಟಿಸಲಾಗುತ್ತಿದೆ. ಆದರೆ, ವಾಸ್ತವದಲ್ಲಿ ಇದರಿಂದ ಕೊಡಗಿನ ಸ್ಥಳೀಯರಿಗೆ ಯಾವುದೇ ತೊಂದರೆ ಇಲ್ಲ ಎಂದು ನಿವೃತ್ತ ಕರ್ನಲ್ ಸಿ.ಪಿ.ಮುತ್ತಣ್ಣ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮಸ್ಥರನ್ನು ಒಕ್ಕಲೆಬ್ಬಿಸಲಾಗುತ್ತದೆ ಎಂಬುದು ಸುಳ್ಳು. ಮನೆ ನಿರ್ಮಾಣ, ಕಾಫಿ ಕೃಷಿ, ಕೊಂಬೆ ಕಡಿಯುವಿಕೆಗೆ ಯಾವುದೇ ನಿರ್ಬಂಧ ಇಲ್ಲ. ಬದಲಾಗಿ ಪರಿಸರ ಸಂರಕ್ಷಣೆಗೆ ಆರ್ಥಿಕ ನೆರವು ಸಿಗಲಿದೆ. ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.

ಕಸ್ತೂರಿ ರಂಗನ್ ವರದಿಯಿಂದ ಜಿಲ್ಲೆಯ ಭೂ ರಕ್ಷಣೆಯಾಗಲಿದೆ. ಭೂಮಿ ಖರೀದಿಯ ಮೇಲಿನ ನಿರ್ಬಂಧ ಏರಲಿದೆ. ಕೊಡಗು ಜಿಲ್ಲೆಯ ವಿನಾಶಕಾರಿ ಯೋಜನೆಗಳನು ತಪ್ಪಿಸುತ್ತದೆ. ಬೃಹತ್ ರೆಸಾರ್ಟ್‌ಗಳಿಗೆ ಕಡಿವಾಣ ಬೀಳಲಿದೆ ಎಂದು ವಿವರಿಸಿದರು.

ಪ್ರತಿಷ್ಠಾನದ ಸದಸ್ಯ ಗೋಪಿನಾಥ್ ತಿಮ್ಮಯ್ಯ ಮಾತನಾಡಿ, ಕಸ್ತೂರಿ ರಂಗನ್ ವರದಿಯಿಂದ ರೆಸಾರ್ಟ್, ಅಕ್ರಮ ಗಣಿಗಾರಿಕೆಯಂತಹ ಪರಿಸರ ವಿರೋಧಿ ಚಟುವಟಿಕೆಗಳಿಗೆ ಮಾತ್ರ ಅಡ್ಡಿಯಾಗಲಿದೆ. ಜಿಲ್ಲೆಯ ಜನತೆಗೆ ಕಸ್ತೂರಿ ರಂಗನ್ ವರದಿಯಿಂದ ಸನುಕೂಲವಾಗುತ್ತದೆ ಎಂದ ಅವರು, ಜಿಲ್ಲೆಯಲ್ಲಿ ಶೇ.೬೦ ರಷ್ಟು ಕಲ್ಲು ಕೋರೆಗಳು ಅಕ್ರಮವಾಗಿ ನಡೆಯುತ್ತಿದ್ದು, ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಶಾನ್ ಬೋಪಯ್ಯ, ಫ್ರ್ಯಾಂಕ್ಲಿನ್ ಇದ್ದರು.