Kodagu

ಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿ

admincoorgdaily

ಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿ

ಮಡಿಕೇರಿ ಜು.28:-ಸರ್ಕಾರದ ಜಲಸಂಪನ್ಮೂಲ ಇಲಾಖೆ ಅವರು ಸೂಚಿಸಿರುವಂತೆ ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಕ್ಷೀಣಿಸುತ್ತಿರುವುದರಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಾಗೂ ಜಲ ನೀತಿ ಅನ್ವಯ ಕುಡಿಯುವ ನೀರಿಗೆ ಪ್ರಥಮ ಆಧ್ಯತೆ ನೀಡಬೇಕಾದ ಕಾರಣ ಪ್ರಸ್ತುತ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಕಾಯ್ದಿರಿಸಿಕೊಂಡು ಬಳಸಬೇಕಾಗಿರುತ್ತದೆ.

 ಮುಂಬರುವ ದಿನಗಳಲ್ಲಿ ಎನ್-ನಿನೊ ಪರಿಣಾಮದಿಂದ ಮಳೆಯ ಕೊರತೆ ಉಂಟಾಗುವ ಸಾಧ್ಯತೆ ಇರುವುದಾಗಿ ಭಾರತೀಯ ಹವಾಮಾನ ಇಲಾಖೆಯು ಸೂಚನೆ ನೀಡಿರುವುದರಿಂದ ರಾಜ್ಯದ ಹಲವು ಕಡೆ ಬರ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇರುವುದರಿಂದ ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ ಎಂದು ಮುಖ್ಯಮಂತ್ರಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿರುತ್ತಾರೆ.

 ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಮೈಸೂರು ವಿಭಾಗದ ಕುಡಿಯುವ ನೀರಿನ ಯೋಜನೆಯ ಸಮಿತಿಯಡಿಯಲ್ಲಿ ಬರುವ ಜಲಾಶಯಗಳಾದ ಕೃಷ್ಣರಾಜಸಾಗರ, ಕಬಿನಿ, ಹಾರಂಗಿ, ಹೇಮಾವತಿ, ಭದ್ರಾ, ನುಗು, ತಾರಕ, ಸುವರ್ಣಾವತಿ, ಚಿಕ್ಲಿಹೊಳೆ, ಗುಂಡಾಲ್, ಉಡುತೊರೆಹಳ್ಳ, ಪಾಟೇಹೊಳೆ ಮತ್ತು ಯಗುಚಿ ಜಲಾಶಯಗಳಲ್ಲಿ ಪ್ರಸ್ತುತ ಲಭ್ಯವಿರುವ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಲು ಹಾಗೂ ರೈತ ಬಾಂಧವರು ಜಲಾಶಯದ ನೀರನ್ನು ಅವಲಂಬಿಸಿರುವ ಬೆಳೆಗಳನ್ನು ಬೆಳೆಯದಂತೆ ಹಾಗೂ ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಂಡು ಕೃಷಿ ಇಲಾಖಾ ಅಧಿಕಾರಿಗಳು ನೀಡುವ ಸಲಹೆಯಂತೆ ಮಳೆ ಆಶ್ರಿತ ಬೆಳೆಗಳನ್ನು ಬೆಳೆಯುವಂತೆ ಈ ಮೂಲಕ ಎಲ್ಲಾ ರೈತ ಬಾಂಧವರಿಗೆ ತಿಳಿಸಿದೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕುಡಿಯುವ ನೀರಿನ ಸಮಿತಿ ಜಲಾಶಯ ಯೋಜನೆಯ ಅಧ್ಯಕ್ಷರು ತಿಳಿಸಿದ್ದಾರೆ.