ವರಮಹಾಲಕ್ಷ್ಮಿ ಹಬ್ಬ: ವೀರಾಜಪೇಟೆಯ ಶ್ರೀ ದಕ್ಷಿಣ ಮಾರಿಯಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
ವೀರಾಜಪೇಟೆ: ವಿರಾಜಪೇಟೆ ತೆಲುಗು ಶೆಟ್ಟರ ಬೀದಿಯಲ್ಲಿರುವ ಶ್ರೀ ದಕ್ಷಿಣ ಮಾರಿಯಮ್ಮ ಮತ್ತು ಶ್ರೀ ಅಂಗಾಳ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಆಗಸ್ಟ್ 21ರ ಶುಕ್ರವಾರದಂದು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಮಧ್ಯಾಹ್ನ 1 ಗಂಟೆಗೆ ಶ್ರೀ ದಕ್ಷಿಣ ಮಾರಿಯಮ್ಮ ದೇವಿಗೆ ವಿಶೇಷ ಪೂಜೆ ನೆರವೇರಲಿದ್ದು, ತದನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ (ಮಹಾಪ್ರಸಾದ) ಏರ್ಪಡಿಸಲಾಗಿದೆ. ಸಾರ್ವಜನಿಕರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತೀರ್ಥ-ಪ್ರಸಾದ ಸ್ವೀಕರಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನದ ಸಮಿತಿ ಅಧ್ಯಕ್ಷರಾದ ಟಿ.ಪಿ. ಕೃಷ್ಣ ವಿನಂತಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
