Kodagu

ವರಮಹಾಲಕ್ಷ್ಮಿ ಪೂಜೆ: ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ

admincoorgdaily

ವರಮಹಾಲಕ್ಷ್ಮಿ ಪೂಜೆ: ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ

ವಿರಾಜಪೇಟೆ: ವಿರಾಜಪೇಟೆ ನಗರದ ಶಿವಕೇರಿಯಲ್ಲಿರುವ ಶ್ರೀ ದುರ್ಗಾ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ಶುಕ್ರವಾರ ಶ್ರದ್ಧಾಭಕ್ತಿಗಳಿಂದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವವನ್ನು ನೆರವೇರಿಸಲಾಯಿತು.

  ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರೀ ವರಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಹಾಗೂ ಅಲಂಕಾರ ಸೇವೆಗಳು ಜರುಗಿದವು. ಈ ಪುಣ್ಯಕರ ಸಂದರ್ಭದಲ್ಲಿ ಆಗಮಿಸಿದ್ದ ನೂರಾರು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.

   ಪೂಜಾ ಕಾರ್ಯಕ್ರಮದ ಭಾಗವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಮುತ್ತೈದೆಯರಿಗೆ ಅರಿಶಿನ-ಕುಂಕುಮ, ಬಳೆ ಹಾಗೂ ರವಿಕೆ ವಸ್ತ್ರವನ್ನು ತಾಂಬೂಲದೊಂದಿಗೆ ನೀಡಿ ಗೌರವಿಸಿ, ಶುಭ ಹಾರೈಸಲಾಯಿತು.

    ಈ ಧಾರ್ಮಿಕ ಸಮಾರಂಭದಲ್ಲಿ ವಿರಾಜಪೇಟೆ ಹಾಗೂ ಸುತ್ತಮುತ್ತಲ ಪ್ರದೇಶದ ನೂರಾರು ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.