Kodagu

ಹರಿಕೇರಿಯಲ್ಲಿ ಶ್ರದ್ಧಾ-ಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜೆ

admincoorgdaily

ಹರಿಕೇರಿಯಲ್ಲಿ ಶ್ರದ್ಧಾ-ಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜೆ

ವಿರಾಜಪೇಟೆ: ವಿರಾಜಪೇಟೆ ಪಟ್ಟಣದಲ್ಲಿನ ಹರಿಕೇರಿಯಲ್ಲಿರುವ ಶ್ರೀ ದೊಡ್ಡಮ್ಮ ತಾಯಿ ಚಿಕ್ಕಮ್ಮತಾಯಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ದೇವಾಲಯ ಸಮಿತಿ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ-ಭಕ್ತಿಯಿಂದ ನೆರವೇರಿದವು.

ಹಬ್ಬದ ಶುಭಸಂದರ್ಭದಲ್ಲಿ ದೇವಿಯರಿಗೆ ವಿಶೇಷ ಅಲಂಕಾರ ಪೂಜೆ ಹಾಗೂ ಮಹಾಮಂಗಳಾರತಿಯನ್ನು ನೆರವೇರಿಸಲಾಯಿತು. ಪೂಜಾ ಕಾರ್ಯಕ್ರಮಗಳ ನಂತರ ದೇವಾಲಯ ಸಮಿತಿಯಿಂದ ಆಗಮಿಸಿದ್ದ ಸರ್ವ ಭಕ್ತಾದಿಗಳಿಗೆ ಮಹಾ ಅನ್ನಸಂತರ್ಪಣೆ (ಪ್ರಸಾದ ವಿನಿಯೋಗ) ನಡೆಯಿತು. ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಪದಾಧಿಕಾರಿಗಳು, ಹರಿಕೇರಿ ನಿವಾಸಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು, ದೇವಿಯ ಕೃಪೆಗೆ ಪಾತ್ರರಾದರು.